ರಾಜ್ಯ

ಹಾನಿಟ್ರ್ಯಾಪ್‌ ಪ್ರಕರಣ | ಪೊಲೀಸರ ಅಂಗಳ ತಲುಪಿದ ರಾಜಣ್ಣ ಮನವಿ

ಬೆಂಗಳೂರು  : ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಹನಿಟ್ರ್ಯಾಪ್‌ ಕುರಿತು ಸಮಗ್ರ ವಿವರಣೆಗಳನ್ನೊಳಗೊಂಡಂತೆ ನೀಡಿದ್ದ ಮನವಿಯನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್‌ ರಾಜ್ಯದ ಪೊಲೀಸ್‌‍ ಮಹಾ ನಿರ್ದೇಶಕರಿಗೆ ರವಾನಿಸಿದ್ದಾರೆ.

ನಿನ್ನೆ ಸಂಜೆ ಬೆಂಗಳೂರಿನಲ್ಲಿ ರಾಜಣ್ಣ ಅವರಿಂದ ಮನವಿ ಸ್ವೀಕರಿಸಿದ್ದ ಪರಮೇಶ್ವರ್‌ ಸಂಜೆಯೇ ಡಿಜಿಪಿಯವರಿಗೆ ಮನವಿ ರವಾನಿಸಿದ್ದು ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದಾರೆ.

ಈ ಮೂಲಕ ಹನಿಟ್ರ್ಯಾಪ್‌ನ ಮನವಿ ಪೊಲೀಸ್‌‍ ಇಲಾಖೆಯ ಅಂಗಳಕ್ಕೆ ಜಾರಿದೆ. ಈ ಮೊದಲು ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದಾಗ ಸಚಿವ ಪರಮೇಶ್ವರ್‌ ತನಿಖೆ ನಡೆಸುವುದಾಗಿ ಹೇಳಿದ್ದರು. ರಾಜಣ್ಣ ಕೂಡ ದೂರು ನೀಡುವುದಾಗಿ ತಿಳಿಸಿದ್ದರು. ಆದರೆ ದೂರಿನ ಬದಲಾಗಿ ಮನವಿ ಸಲ್ಲಿಸಿದ್ದಾರೆ.

ಮನವಿಯನ್ನು ಆಧರಿಸಿ ಎಫ್‌ಐಆರ್‌ ದಾಖಲಿಸಲು ಸಾಧ್ಯವಿಲ್ಲ. ಹೀಗಾಗಿ ಮನವಿಯ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆದು ಅಗತ್ಯ ಕ್ರಮ ಕೈಗೊಳ್ಳುವಂತೆ ಗೃಹಸಚಿವರು ಸೂಚಿಸಿದ್ದಾರೆ.

ಈ ಮೊದಲು ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಪರಮೇಶ್ವರ್‌ ಹೇಳಿದ್ದರು. ವಿರೋಧಪಕ್ಷಗಳು ಸಿಬಿಐ ಅಥವಾ ನ್ಯಾಯಾಂಗ ತನಿಖೆ ನಡೆಸುವಂತೆ ಪಟ್ಟು ಹಿಡಿದಿದ್ದವು. ರಾಜ್ಯಸರ್ಕಾರ ಎಸ್‌‍ಐಟಿ ರಚಿಸಿ ತನಿಖೆ ಮುಂದುವರೆಸುವ ಇರಾದೆಯಲ್ಲಿದೆ. ಸದ್ಯದ ಪರಿಸ್ಥಿತಿಯಲ್ಲಿ ಕಾನೂನು ತಜ್ಞರ ಅಭಿಪ್ರಾಯ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

7 hours ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

8 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

8 hours ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

8 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

9 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

9 hours ago