ಕರ್ನಾಟಕದಲ್ಲಿ ಮಹಿಳೆಯರ ರಕ್ಷಣೆಯೇ ಮುಖ್ಯ
ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ನಂಥ ಪ್ರಕರಣಗಳು ಕಂಡು ಬಂದರೆ, ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಕನ್ನಡ ಚಿತ್ರರಂಗದಲ್ಲೂ ಕಾಸ್ಟಿಂಗ್ ಕೌಚ್ ಸದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಆ ರೀತಿ ಏನಾದರೂ ಆಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು. ಮಹಿಳೆಯರ ರಕ್ಷಣೆಯೇ ನಮಗೆ ಮುಖ್ಯ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆ ವಿಚಾರದ ಬಗ್ಗೆ ಭರವಸೆ ನೀಡಿದ್ದಾರೆ. ಮಹಿಳೆಯರ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ. ಕಾಸ್ಟಿಂಗ್ ಕೌಚ್ ನಂತ ಪ್ರಕರಣಗಳು ಕಂಡು ಬಂದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದರು.
ಶೀಘ್ರವೇ ಅಂಗನವಾಡಿ ಶಿಕ್ಷಕಿಯರಿಗೆ ವೇತನ
3 ಜಿಲ್ಲೆಗಳ ಅಂಗನವಾಡಿ ಶಿಕ್ಷಕಿಯರಿಗೆ ಬಾಕಿ ಉಳಿದಿರುವ ವೇತನವನ್ನು ಶೀಘ್ರವೇ ಬಿಡುಗಡೆಗೊಳಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಎಲ್ಲಾ ವಿಚಾರವೂ ಅಂಗನವಾಡಿ ಶಿಕ್ಷಕಿಯರಿಗೆ ಗೊತ್ತಿದೆ. ರಾಜ್ಯ ಸರ್ಕಾರದಿಂದ 7 ಸಾವಿರ ರೂ, ಕೇಂದ್ರದಿಂದ 4 ಸಾವಿರ ರೂ ನೀಡಲಾಗುತ್ತಿದೆ. ಈಗಾಗಲೇ ಕೇಂದ್ರ ಸಚಿವರ ಜೊತೆ ಮಾತಾಡಿದ್ದೇನೆ. ಈ ಹಿಂದೆಯೂ ಹಲವು ಬಾರಿ ವೇತನ ವಿಳಂಬ ಆಗಿತ್ತು. ಗೌರಿ ಗಣೇಶ ಹಬ್ಬದೊಳಗೆ ಹಣ ಬಿಡುಗಡೆಗೆ ಪ್ರಯತ್ನ ಮಾಡುತ್ತೇವೆ ಎಂದು ಸಚಿವರು ಹೇಳಿದ್ದಾರೆ.
ಮುಸ್ಲಿಮರ ಓಲೈಕೆಗಾಗಿ ಜಮೀನು ಕಬಳಿಕೆ, ಇದರ ವಿರುದ್ಧ ಬಿಜೆಪಿ ಬೃಹತ್ ಹೋರಾಟ ಚನ್ನಪಟ್ಟಣ: ಇದು ವ್ಯಕ್ತಿಗಳ ನಡುವೆ ನಡೆಯುತ್ತಿರುವ ಚುನಾವಣೆಯಲ್ಲ,…
ಮೈಸೂರು: ನಾಲ್ಕು ದಶಕಕ್ಕೂ ಹೆಚ್ಚು ಕಾಲ ಜನರನ್ನು ರಂಜಿಸಿದ್ದ ನಗರದ ಸರಸ್ವತಿ ಚಿತ್ರಮಂದಿರ ನೆನಪಿನಂಗಳಕ್ಕೆ ಸರಿಯುತ್ತಿದೆ. ಪ್ರೇಕ್ಷಕರ ಕೊರತೆಯಿಂದ ಕೋವಿಡ್…
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿಂದು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಅನೇಕ ಹಳ್ಳಿಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.…
ನವದೆಹಲಿ: ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು…
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಕೇಂದ್ರ…
ಮುಂಬೈ: ಇನ್ನು 10 ದಿನದೊಳಗೆ ಸಿಎಂ ಸ್ಥಾನದಿಂದ ಕೆಳಗಿಳಿಯದಿದ್ದರೆ ಹತ್ಯೆ ಮಾಡುವುದಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಕೊಲೆ…