Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಸೋಲು: ಜನಾದೇಶದ ತೀರ್ಪು ಒಪ್ಪುತ್ತೇವೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ರಾಯಚೂರು: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲುವ ವಿಶ್ವಾಸವಿತ್ತು. ಆದರೆ, ಅಲ್ಲಿ ಸೋತು, ಜಮ್ಮು ಮತ್ತು ಕಾಶ್ಮೀರದಲ್ಲಿ ಗೆದಿದ್ದೆ. ಹೀಗಾಗಿ ಪ್ರಜಾಪ್ರಭುತ್ವದ ಜನಾದೇಶದ ತೀರ್ಪುನ್ನು ಒಪ್ಪುತ್ತೇವೆ ಎಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಸಿಂಧನೂರಿನಲ್ಲಿ ಇಂದು(ಅ.8) ಆಯೋಜಿಸಿದ್ದ ರೈತ ದಸರಾ ಕಾರ್ಯಕಮದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರ ತೀರ್ಪನ್ನು ನಾವೆಲ್ಲರೂ ಗೌರವಿಸಬೇಕು. ಹರಿಯಾಣದಲ್ಲಿ ಕಾಂಗ್ರೆಸ್‌ ಎಲ್ಲಿ ಎಡವಿದೆ ಎಂಬುದನ್ನು ಪರೀಶಿಲಿಸುತ್ತವೆ. ಮುಂದಿನ ದಿನಗಳಲ್ಲಿ ಹೀಗಾಗದಂತೆ ಎಚ್ಚರವಹಿಸುತ್ತೇವೆ ಎಂದು ಹೇಳಿದರು.

ಮುಡಾ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ಮುಡಾ ಪ್ರಕರಣದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಮುಡಾ ಹಗರಣಕ್ಕೂ ಸಿಎಂ ಸಿದ್ದರಾಮಯ್ಯ ಅವರಿಗೂ ಯಾವುದೇ ಸಂಬಂಧವಿಲ್ಲ. ಈಗಾಗಲೇ ಮುಡಾ ತನಿಖೆ ಕಾನೂನಿನ ಪ್ರಕಾರ ನಡೆಯುತ್ತಿದೆ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಆಗಿಯೇ ಇರುತ್ತಾರೆ. ಜೊತೆಗೆ ನಮ್ಮ ಸರ್ಕಾರವು ಇರುತ್ತದೆ ಎಂದರು.

Tags: