ರಾಜ್ಯ

ಹಾಸನ ಅಶ್ಲೀಲ ವಿಡಿಯೋ ಪ್ರಕರಣ: ವಿಡಿಯೋ ಅಳಿಸಲು ಸಂತ್ರಸ್ತೆಯರ ಮನವಿ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಬಗ್ಗೆ ದೂರು ಆಲಿಸಲು ಎಸ್‌ಐಟಿ ಅಧಿಕಾರಿಗಳು ಲೈಂಗಿಕ ದೌರ್ಜನ್ಯ ಸಂತ್ರಸ್ಥೆಯರಿಗೆಂದೇ ಸಹಾಯವಾಣಿ(6360938947) ಆರಂಭಿಸಿದೆ. ಪ್ರತಿನಿತ್ಯವು ಸಹಾಯವಾಣಿಗೆ ಕರೆ ಮಾಡುತ್ತಿರುವ ಸಂತ್ರಸ್ತೆಯರು ಮತ್ತು ಅವರ ಸಂಬಂಧಿಕರು ದಯವಿಟ್ಟು ವಿಡಿಯೋಗಳನ್ನು ಅಳಿಸಿ ನಮ್ಮ ಮರ್ಯಾದೆ ಕಾಪಾಡಿ ಎಂದು ಎಸ್‌ಐಟಿ ಅಧಿಕಾರಿಗಳನ್ನು ಮನವಿ ಮಾಡುತ್ತಿದ್ದಾರೆ.

ಕರೆ ಸ್ವೀಕರಿಸಲೆಂದೇ ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ನಿತ್ಯವು 10 ರಿಂದ 20 ದೂರವಾಣಿ ಕರೆಗಳು ಬರುತ್ತಿದ್ದು, ಎಸ್‌ಐಟಿ ತಂಡ ಪ್ರತಿಯೊಬ್ಬರ ಮಾತುಗಳನ್ನು ಆಲಿಸಿ ಗಂಭೀರವಾಗಿ ಪರಿಗಣಿಸುತ್ತಿದೆ. ಸಂತ್ರಸ್ತೆಯರ ಒಪ್ಪಿಗೆ ಪಡೆದು ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದು, ಹೇಳಿಕೆ ನೀಡದ ಸಂತ್ರಸ್ತೆಯರಿಗೆ ಸಿಬ್ಬಂದಿ ಧೈರ್ಯ ತುಂಬುತ್ತಿದ್ದಾರೆ. ಯಾವುದೇ ಸಮಯದಲ್ಲಾದರೂ ಕರೆ ಮಾಡಿ ಹೇಳಿಕೆ ನೀಡುವಂತೆ ಕೋರುತ್ತಿದ್ದಾರೆ.

ಸಾಮಾಜಿಕ ಜಾಲತಾಣ ಮತ್ತು ಇತರೆಡೆ ವಿಡಿಯೋಗಳು ಹರಿದಾಡುತ್ತಿವೆ. ವಿಡಿಯೋ ನೋಡಿದ ಪರಿಚಯಸ್ಥರು, ಸಂಬಂಧಿಕರು ನಮ್ಮ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಇದರಿಂದ ನಮಗೆ ತೀವ್ರ ಬೇಸರವಾಗಿ, ಮಾನಸಿಕವಾಗಿ ಕುಗ್ಗಿದ್ದೇವೆ. ದಯಮಾಡಿ ಎಲ್ಲ ಕಡೆ ಹರಿದಾಡುತ್ತಿರುವ ವಿಡಿಯೋಗಳನ್ನು ಅಳಿಸಿ ಎಂದು ಕೆಲ ಸಂತ್ರಸ್ತೆಯರು ಮನವಿ ಮಾಡಿಕೊಳ್ಳುತ್ತಿದ್ದಾರೆ.

ಮನೆಯಿಂದ ಹೊರ ಹೋಗಲು ಆಗುತ್ತಿಲ್ಲ. ರಸ್ತೆ ಹಾಗೂ ಮಾರುಕಟ್ಟೆಗಳಲ್ಲಿ ಅವಮಾನವಾಗುತ್ತಿದೆ. ಹಲವರ ಮೊಬೈಲ್‌ ಹಾಗೂ ಕಂಪ್ಯೂಟರ್‌ಗಳಲ್ಲಿ ವಿಡಿಯೋಗಳಿವೆ ಅಂಥವರನ್ನು ಗುರುತಿಸಿ ಕ್ರಮ ಕೈಗೊಳ್ಳಿ ಎಂದು ಸಂತ್ರಸ್ತೆಯೊಬ್ಬರ ಕುಟುಂಬಸ್ಥರು ಕೋರಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರವಾಸಿ ಮಹಿಳೆ ನಾಪತ್ತೆ

ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…

3 hours ago

ಓದುಗರ ಪತ್ರ: ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ

ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…

3 hours ago

ಓದುಗರ ಪತ್ರ: ಮರುಪರಿಶೀಲನೆ ಅತ್ಯಗತ್ಯ

ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…

3 hours ago

ಬಸ್‌ನಲ್ಲಿ ಚಿನ್ನಾಭರಣ ಕಳವು

೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು ೧೮…

3 hours ago

ಮೈಸೂರು ಡಿಸಿ ಬಂಧನಕ್ಕೆ ವಾರಂಟ್

ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…

3 hours ago