ಹಾಸನ: ಹಾಡಹಗಲೇ ಗುಂಡಿನ ದಾಳಿ ನಡೆದು, ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನದ ಹೊಯ್ಸಳ ಬಡಾವಣೆಯಲ್ಲಿ ನಡೆದಿದೆ.
ಹಾಸನದ ಶರಾಫತ್ ಅಲಿ(52) ಹಾಗೂ ಬೆಂಗಳೂರಿನ ಆಸೀಫ್(46) ಮೃತರು. ಇವರಿಬ್ಬರು ಶುಂಠಿ ವ್ಯಾಪಾರಿಯಾಗಿದ್ದು, ಇತ್ತೀಚಿಗೆ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು ಎನ್ನಲಾಗಿದೆ.
ಇವರಿಬ್ಬರೂ ಇಂದು(ಜೂ.20) ಹಾಸನದ ಹೊಯ್ಸಳ ನಗರಕ್ಕೆ ಬಂದಿದ್ದರು. ಶೂಟೌಟ್‌ಗೆ ರಿಯಲ್ ಎಸ್ಟೇಟ್ ಉದ್ಯಮವೇ ಕಾರಣ ಎನ್ನಲಾಗಿದೆ. ಇನ್ನೂ ಗುಂಡಿನ ದಾಳಿ ಬಗ್ಗೆ ಸ್ಪಷ್ಟತೆ ಸಿಗಬೇಕಿದೆ.
ಸ್ಥಳಕ್ಕೆ ಹಾಸನ ಎಸ್‌ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು, ಎಫ್‌ಎಸ್‌ಎಲ್ ತಜ್ಞರಿಂದ ಪರಿಶೀಲನೆ ನಡೆಸಲಾಗಿದೆ. ಹಾಸನದ ಕೆಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಬೆಂಗಳೂರು : ನಾಯಕ ರಜತ್ ಪಾಟೀದಾರ್, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್…
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…