ರಾಜ್ಯ

ಹಾಸನ: ಈಜಲು ಹೋದ ನಾಲ್ವರ ಮಕ್ಕಳು ಶವವಾಗಿ ಪತ್ತೆ

ಹಾಸನ: ಕೆರೆಯಲ್ಲಿ ಈಜಲು ಹೋದ ನಾಲ್ವರು ಮಕ್ಕಳು ನೀರಲ್ಲಿ ಮುಳಗಿ ಮೃತಪಟ್ಟಿರುವ ಘಟನೆ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಗುರುವಾರ(ಮೇ.16) ನಡೆದಿದೆ.

ಮೃತರನ್ನು ಹಾಸನದ ಮುತ್ತಿಗೆ ಗ್ರಾಮದ ಜೀವನ್(13)‌ ಸಾತ್ವಿಕ್(11)‌ ವಿಶ್ವಸ್‌ (12) ಪೃಥ್ವಿ(12) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಸ್ನೇಹಿತ ಚಿರಾಗ್‌ ದಡ ತಲುಪಿ ಸಾವಿನಿಂದ ಪಾರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.

ಮಕ್ಕಳು ಈಜಾಡಲು ತಿಮ್ಮನಹಳ್ಳಿಯ ಕೆರೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಮೊದಲು ಜೀವನ್‌ ನೀರಿನಲ್ಲಿ ಮುಳುಗಿದ್ದಾನೆ. ನಂತರ ಅವನನ್ನು ರಕ್ಷಿಸುವಾಗ ಉಳಿದವರು ಮುಳುಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕ ಮತ್ತು ತುರ್ತು ಚಿಕಿತ್ಸಾ ವಿಭಾಗದ ಅಧಿಕಾರಿಗಳು ಮತ್ತು ಈಜುಗಾರರ ಸಹಾಯದಿಂದ ಪೊಲೀಸರು ಮೃತದೇಹವನ್ನು ಹೊರತೆಗೆದಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಲೂರಿನ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

ಘಟನ ಸ್ಥಳಕ್ಕೆ ಸಕಲೇಶಪುರ ಶಾಸಕ ಸಿಮೆಂಟ್‌ ಮಂಜು ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರು-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರ ಸಾವು

ಟಿ.ನರಸೀಪುರ: ಕಾರು ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು…

7 mins ago

ಓಂಕಾರ್ ವಲಯದಲ್ಲಿ ಹತೋಟಿಗೆ ಬಾರದ ಒಂಟಿ ಸಲಗದ ಉಪಟಳ: ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…

27 mins ago

ಬಂಡೀಪುರದಲ್ಲಿ ಸಫಾರಿಗರಿಗೆ ಹುಲಿ ದರ್ಶನ: ಜಿಂಕೆ ಬೇಟೆಯಾಡಿದ ಸೀಳು ನಾಯಿ

ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…

37 mins ago

ಚಾರಣದಲ್ಲಿ ಮಾರ್ಗಸೂಚಿ ಕಟ್ಟುನಿಟ್ಟು ಅನುಸರಣೆಗೆ ಕ್ರಮ ಅಗತ್ಯ

ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…

2 hours ago

ಐತಿಹಾಸಿಕ ಸಂಸತ್ ಅಧಿವೇಶನಕ್ಕೆ ದಿನಗಣನೆ!

ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ  ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್, ಬಿಜೆಪಿ ಪಾಳೆಯದಲ್ಲಿ ಮಿಶ್ರಭಾವನೆ ಹುಟ್ಟು ಹಾಕಿದ ಉಪಚುನಾವಣೆ

ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…

2 hours ago