ಬೆಂಗಳೂರು- ಹಾಸನದಲ್ಲಿ ಜೆಡಿಎಸ್ ಟಿಕೆಟ್ಗಾಗಿ ಸಮರ ತಾರಕಕ್ಕೇರಿದ್ದು, ಮಾಜಿ ಸಚಿವ ಹೆಚ್ ಡಿ ರೇವಣ್ಣ ಮಧ್ಯಪ್ರವೇಶದಿಂದ ಸ್ವಲ್ಪಮಟ್ಟಿಗೆ ತಣ್ಣಗಾಗಿದೆ. ಆದರೂ, ಒಳ, ಒಳಗಿನ ಬೇಗುದಿ ಇನ್ನೂ ಆರಿಲ್ಲ ಎಂದು ಹೇಳಲಾಗುತ್ತಿದೆ. ಕೆಲದಿನಗಳ ಹಿಂದೆ ಭವಾನಿ ರೇವಣ್ಣ ಅವರು ಒಂದು ಕಾರ್ಯಕ್ರಮದಲ್ಲಿ ಹಾಸನದ ಟಿಕೆಟ್ ವಿಷಯವಾಗಿ ಹೇಳಿದ ಹೇಳಿಕೆ ಇಷ್ಟೆಲ್ಲ ಗೊಂದಗಳಿಗೆ ಕಾರಣವಾಗಿದೆ.
ಬಿಜೆಪಿ ತೆಕ್ಕೆಯಲ್ಲಿರುವ ಹಾಸನ ವಿಧಾನಸಭಾ ಕ್ಷೇತ್ರವನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು, ಮಾಜಿ ಶಾಸಕ ದಿ ಎಚ್ ಎಸ್ ಪ್ರಕಾಶ್ ಅವರ ಪುತ್ರ ಹೆಚ್ ಪಿ ಸ್ವರೂಪ್ಗೆ ಟಿಕೆಟ್ ನೀಡಲು ಒಲವು ತೋರಿಸಿದ್ದರು. ಭವಾನಿ ರೇವಣ್ಣ ಅವರು ನನ್ನನ್ನೇ ಅಭ್ಯರ್ಥಿ ಮಾಡುತ್ತಾರೆ ಎಂದು ಯಾವಾಗ ಬಹಿರಂಗವಾಗಿ ಸ್ವಯಂ ಘೋಷಣೆ ಮಾಡಿಕೊಂಡರೋ ಅಲ್ಲಿಂದ ಹಾಸನ ಜೆಡಿಎಸ್ ಕ್ಷೇತ್ರದಲ್ಲಿ ಗೊಂದಲ ಏರ್ಪಡಲು ಆರಂಭವಾಯಿತು. ಟಿಕೆಟ್ ಬೇಕೇ ಬೇಕು ಎಂದು ಭವಾನಿ ರೇವಣ್ಣ ಪಟ್ಟು ಹಿಡಿದಿರುವುದರಿಂದ ಕುಟುಂಬ ಕದನ ಭುಗಿಲೇಳುವಂತೆ ಮಾಡಿದೆ. ಆದರೆ, ಇದಕ್ಕೆ ಕುಮಾರಸ್ವಾಮಿ ಅಡ್ಡಿಯಾಗಿರುವುದು ಹೆಚ್ ಡಿ ರೇವಣ್ಣ ಕುಟುಂಬಕ್ಕೆ ನುಂಗಲಾರದ ತುತ್ತಾಗಿದೆ.
ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಮಧ್ಯಪ್ರವೇಶ ಮಾಡಿದ್ದು, ನಾನು ತಿಳಿಸುವವರೆಗೂ ಹಾಸನ ಟಿಕೆಟ್ ಕುರಿತು ಯಾರೂ ಮಾತನಾಡಬಾರದು ಎಂದು ಮಗ ರೇವಣ್ಣನ ಮೂಲಕ ಗೌಡರು ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.
ಕುಮಾರಸ್ವಾಮಿ ಅವರ ವಿರೋಧದ ನಡುವೆಯೂ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಓಡಾಡುತ್ತಿದ್ದರು. ಇನ್ನೊಂದು ಕಡೆ ಟಿಕೆಟ್ ಆಕಾಂಕ್ಷಿ ಹೆಚ್ ಪಿ ಸ್ವರೂಪ್ ಸಹ ಹಳ್ಳಿ ಹಳ್ಳಿಗಳಿಗೆ ತೆರಳಿ ಪ್ರಚಾರ ಕೈಗೊಂಡಿದ್ದಾರೆ. ನಿತ್ಯ ಆಪ್ತರ ಹಾಗೂ ಕಾರ್ಯಕರ್ತರ ಜೊತೆ ಸಭೆ ನಡೆಸಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಎಲ್ಲೋ ಒಂದು ಕಡೆ ಹೆಚ್ ಡಿ ರೇವಣ್ಣ ಅವರನ್ನು ಎದುರು ಹಾಕಿಕೊಂಡು ಚುನಾವಣಾ ಅಖಾಡಕ್ಕೆ ಇಳಿದು ಗೆಲುವು ಸಾಧಿಸುವುದು ಕಷ್ಟ ಎಂಬುದು ಸ್ವರೂಪ್ ಅವರಿಗೆ ಗೊತ್ತಿದೆ.ಆದರೂ, ಕುಮಾರಸ್ವಾಮಿ ಅವರು ತಮಗೆ ಬೆಂಬಲ ನೀಡುವರು ಎಂಬ ಕಾರಣದಿಂದ ಸಂಘಟನೆಯಲ್ಲಿ ತೊಡಗಿದ್ದಾರೆ. ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೊಂದಲ ದೇವೇಗೌಡರ ಕುಟುಂಬದ ಸಮರವಾಗಿ ಮಾರ್ಪಟ್ಟಿದೆ. ಭವಾನಿ ರೇವಣ್ಣ ಅವರಿಗೆ ಟಿಕೆಟ್ ಕೊಡಲು ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಇಷ್ಟವಿಲ್ಲ. ಹಾಗಾಗಿಯೇ, ರೇವಣ್ಣ ನಡೆ ನಿಗೂಢವಾಗಿದೆ. ಆದರೆ, ದೇವೇಗೌಡರು ಯಾರಿಗೆ ಮಣೆ ಹಾಕುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
ಈ ಹಿಂದೆಯೂ ಸಹ ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರು ಇದೇ ಸವಾಲು ಎದುರಿಸಿದ್ದರು. ತಮ್ಮ ಕಡೇ ಚುನಾವಣೆಯಲ್ಲಿ ಹಾಸನ ಕ್ಷೇತ್ರವನ್ನು ಬಿಟ್ಟುಕೊಂಡು ತುಮಕೂರಿಗೆ ಹೋಗಿ ನಿಂತರು. ಹಾಸನದಲ್ಲಿ ಮೊಮ್ಮಗ ಪ್ರಜ್ವಲ್ ರೇವಣ್ಣ ಗೆದ್ದರು. ತುಮಕೂರಿನಲ್ಲಿ ದೇವೇಗೌಡರು ಸೋತರು. ಆದರೆ, ಈಗ ಮತ್ತೆ ಸೊಸೆ ಹಾಸನ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ವಿಚಾರವಾಗಿಯೂ ಗೌಡರು ತೀರ್ಮಾನ ಮಾಡಬೇಕಿದೆ. ಇನ್ನು ಟಿಕೆಟ್ ಆಕಾಂಕ್ಷಿ ಸ್ವರೂಪ್ ಪರನೋ ಅಥವಾ ಸೊಸೆ ಪರ ನಿಲ್ಲುತ್ತಾರಾ ಗೌಡರು ಎಂಬುದಕ್ಕೆ ಕೆಲವೇ ದಿನಗಳಲ್ಲಿ ಸ್ಪಷ್ಟತೆ ಸಿಗಲಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಬೆಟ್ಟದಪುರ : ನಿಷೇಧವಿದ್ದರೂ ಜಾನುವಾರು ತಂದ ರೈತರು
Next Article ಬ್ರೆಜಿಲ್ನಲ್ಲಿ 7.3 ಕೆ.ಜಿ ದೈತ್ಯ ಮಗು ಜನನ