ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣದಲ್ಲಿ ಅರಕಲಗೂಡು ಶಾಸಕ ಎ. ಮಂಜು ಅವರನ್ನು ಪೊಲೀಸರು ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ.
ಪೆನ್‌ಡ್ರೈವ್ ಪ್ರಕರಣ ಆರೋಪಿ ನವೀನ್‌ಗೌಡ, ಪೆನ್‌ಡ್ರೈವ್‌ನನ್ನು ಶಾಸಕ ಎ.ಮಂಜು ಅವರಿಗೆ ನೀಡಿದ್ದೆ ಎಂದು ಫೇಸ್‌ಬುಕ್‌ನಲ್ಲಿ ಆರೋಪಿಸಿದ್ದರು. ಈ ಹಿನ್ನೆಲೆ ಹಾಸನ ಸೆನ್ ಠಾಣೆಯ ಪೊಲೀಸರು ಮಂಜು ಅವರನ್ನು ವಿಚಾರಣೆ ನಡೆಸಿದ್ದಾರೆ.
ತನಿಖಾ ಅಧಿಕಾರಿಯಾಗಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಕೆ ತಿಮ್ಮಯ್ಯ ಅವರು ಶಾಸಕ ಮಂಜು ಅವರನ್ನು ಒಂದು ಗಂಟೆ ಕಾಲ ವಿಚಾರಣೆ ನಡೆಸಿದರು.
ಎಸ್‌ಐಟಿ ಅಧಿಕಾರಿಗಳು ಈಗಾಗಲೇ ನವೀನ್‌ಗೌಡ ಅವರನ್ನು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ. ಆತ ನೀಡಿರುವ ಮಾಹಿತಿ ಆಧರಿಸಿ ಶಾಸಕ ಮಂಜು ಅವರಿಗ ಎಸ್‌ಐಟಿ ನೋಟಿಸ್ ನೀಡಿತ್ತು.
ವಿಚಾರಣೆ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಎ.ಮಂಜು, ನವೀನ್‌ಗೌಡ ವಿರುದ್ಧ ನಾನೇ ದೂರು ನೀಡಿದ್ದೆ. ಅದರ ಸಂಬಂಧ ಎಸ್‌ಐಟಿ ತಂಡಕ್ಕೆ ಮಾಹಿತಿ ನೀಡಿದ್ದೇನೆ ಎಂದು ಹೇಳಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…