Mysore
20
broken clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಹಾಸನ ಪೆನ್‌ಡ್ರೈವ್‌ ಪ್ರಕರಣ: ವಿಶೇಷ ತನಿಖಾ ತಂಡ ರಚಿಸಲು ಮುಖ್ಯಮಂತ್ರಿಗೆ ಮಹಿಳಾ ಆಯೋಗ ಒತ್ತಾಯ

ಬೆಂಗಳೂರು: ಹಾಸನ ಜಿಲ್ಲೆಯ ಪೆನ್‌ಡ್ರೈವ್‌ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿವಿಧ ಮಹಿಳೆಯರ ಖಾಸಗಿ ವಿಡಿಯೊಗಳು ಹರಿದಾಡುತ್ತಿದೆ ಎನ್ನಲಾಗುತ್ತಿದ್ದು, ಈ ಕುರಿತು ಮಹಿಳಾ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ವಿಶೇಷ ತನಿಖಾ ತಂಡ ರಚಿಸಲು ಒತ್ತಾಯಿಸಿದೆ.

ಇಂದು ( ಏಪ್ರಿಲ್‌ 25 ) ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್‌ನಲ್ಲಿ ಮಹಿಳೆಯರ ಮೇಲೆ ನಡೆಸಲಾಗಿರುವ ಹಿಂಸೆಯ ಕುರಿತು ಮತ್ತು ಸಾವಿರಾರು ಅಮಾಯಕ ಹೆಣ್ಣುಮಕ್ಕಳನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಂಡು ಮೊಬೈಲ್‌ನಲ್ಲಿ ಖಾಸಗಿ ವಿಡಿಯೊವನ್ನು ಚಿತ್ರಿಸಿದ್ದಾರೆ ಎಂದಿದ್ದಾರೆ.

ಹಾಸನ ಜಿಲ್ಲೆಯ ಪೆನ್‌ಡ್ರೈವ್‌ ಸುದ್ದಿಯು ಸಾಮಾಜಿಕ ಜಾಲತಾಣದಲ್ಲಿ ಹಾಗೂ ಮಾಧ್ಯಮದಲ್ಲಿ ಪ್ರಕಟವಾಗಿದ್ದು ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಪತ್ರದಲ್ಲಿ ಉಲ್ಲೇಖಿಸಿದೆ.

Tags: