ಬೆಂಗಳೂರು: ಹಾಸನ ಜಿಲ್ಲೆಯ ಪೆನ್‌ಡ್ರೈವ್ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿವಿಧ ಮಹಿಳೆಯರ ಖಾಸಗಿ ವಿಡಿಯೊಗಳು ಹರಿದಾಡುತ್ತಿದೆ ಎನ್ನಲಾಗುತ್ತಿದ್ದು, ಈ ಕುರಿತು ಮಹಿಳಾ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ವಿಶೇಷ ತನಿಖಾ ತಂಡ ರಚಿಸಲು ಒತ್ತಾಯಿಸಿದೆ.
ಇಂದು ( ಏಪ್ರಿಲ್ 25 ) ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್‌ನಲ್ಲಿ ಮಹಿಳೆಯರ ಮೇಲೆ ನಡೆಸಲಾಗಿರುವ ಹಿಂಸೆಯ ಕುರಿತು ಮತ್ತು ಸಾವಿರಾರು ಅಮಾಯಕ ಹೆಣ್ಣುಮಕ್ಕಳನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಂಡು ಮೊಬೈಲ್‌ನಲ್ಲಿ ಖಾಸಗಿ ವಿಡಿಯೊವನ್ನು ಚಿತ್ರಿಸಿದ್ದಾರೆ ಎಂದಿದ್ದಾರೆ.
ಹಾಸನ ಜಿಲ್ಲೆಯ ಪೆನ್‌ಡ್ರೈವ್ ಸುದ್ದಿಯು ಸಾಮಾಜಿಕ ಜಾಲತಾಣದಲ್ಲಿ ಹಾಗೂ ಮಾಧ್ಯಮದಲ್ಲಿ ಪ್ರಕಟವಾಗಿದ್ದು ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಪತ್ರದಲ್ಲಿ ಉಲ್ಲೇಖಿಸಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…