ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಪ್ರಕರಣಗಳು ದಿನದಿಂದ ದಿನಕ್ಕೆ ಹೊಸತಿರುವು ಪಡೆಯುತ್ತಿದೆ. ಈಗಾಗಲೇ ಎಸ್‌ಐಟಿ ಅಧಿಕಾರಿಗಳ ತನಿಖೆ ಚುರುಕುಗೊಳಿಸಿದ್ದು, ಸಂತ್ರಸ್ತೆಯರ ನೆರವಿಗಾಗಿ ಸಹಾಯವಾಣಿಯನ್ನು ಆರಂಭಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತೆಯರ ನೆರವಿಗಾಗಿ ದೂ.ಸಂ 6360938947 ಸಹಾಯವಾಣಿ ಆರಂಭಿಸಿದ್ದು, ಸಂತ್ರಸ್ತೆಯರು ಹಾಗೂ ಅವರಿಗೆ ಸಂಬಂಧಪಟ್ಟ ವ್ಯಕ್ತಿಗಳು ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದು ಎಂದು ಎಸ್‌ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಪತ್ರಿಕ ಪ್ರಕಟಣೆ ಹೊರಡಿಸಿದ್ದಾರೆ.
ಸಂತ್ರಸ್ತೆಯರಿಗೆ ಅಗತ್ಯವಿರುವ ಕಾನೂನು ನೆರವು, ರಕ್ಷಣೆ ಹಾಗೂ ಇತರೆ ಸಹಾಯ ಮಾಡಲು ನಾವು ಸಿದ್ಧರಿದ್ದೇವೆ. ಕೃತ್ಯದ ಬಗ್ಗೆ ದೂರು ನೀಡುವವರ ಹೆಸರು ಗೌಪ್ಯವಾಗಿಡಲಾಗುವುದು ಎಂದು ಅವರು ತಿಳಿಸಿದ್ದಾರೆ.





