ರಾಜ್ಯ

ಹಾಸನ ಲೈಂಗಿಕ ಪ್ರಕರಣ: ಸಂತ್ರಸ್ತೆಯರ ನೆರವಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಪ್ರಕರಣಗಳು ದಿನದಿಂದ ದಿನಕ್ಕೆ ಹೊಸತಿರುವು ಪಡೆಯುತ್ತಿದೆ. ಈಗಾಗಲೇ ಎಸ್‌ಐಟಿ ಅಧಿಕಾರಿಗಳ ತನಿಖೆ ಚುರುಕುಗೊಳಿಸಿದ್ದು, ಸಂತ್ರಸ್ತೆಯರ ನೆರವಿಗಾಗಿ ಸಹಾಯವಾಣಿಯನ್ನು ಆರಂಭಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತೆಯರ ನೆರವಿಗಾಗಿ ದೂ.ಸಂ 6360938947 ಸಹಾಯವಾಣಿ ಆರಂಭಿಸಿದ್ದು, ಸಂತ್ರಸ್ತೆಯರು ಹಾಗೂ ಅವರಿಗೆ ಸಂಬಂಧಪಟ್ಟ ವ್ಯಕ್ತಿಗಳು ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದು ಎಂದು ಎಸ್‌ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಪತ್ರಿಕ ಪ್ರಕಟಣೆ ಹೊರಡಿಸಿದ್ದಾರೆ.

ಸಂತ್ರಸ್ತೆಯರಿಗೆ ಅಗತ್ಯವಿರುವ ಕಾನೂನು ನೆರವು, ರಕ್ಷಣೆ ಹಾಗೂ ಇತರೆ ಸಹಾಯ ಮಾಡಲು ನಾವು ಸಿದ್ಧರಿದ್ದೇವೆ. ಕೃತ್ಯದ ಬಗ್ಗೆ ದೂರು ನೀಡುವವರ ಹೆಸರು ಗೌಪ್ಯವಾಗಿಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

6 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

6 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

7 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

7 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

8 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

8 hours ago