ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ಸಾವನ್ನಪ್ಪಿದ್ದ ಘಟನೆ ಹಾಸನದಲ್ಲಿ ಇತ್ತೀಚೆಗೆ ನಡೆದಿತ್ತು. ಈ ದುರಂತ ಮಾಸುವ ಮುನ್ನವೇ ಇದೀಗ ಮತ್ತೊಂದು ಇಂತದ್ದೆ ಘಟನೆ ನಡೆದಿದೆ. ಹಾಸನದ ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ಇಂದು(ಮೇ.31) ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
ದೀಕ್ಷಿತ್(10) ನಿತ್ಯಶ್ರೀ(12) ಕುಸುಮ(6) ಮೃತಪಟ್ಟ ಮಕ್ಕಳು. ಹಸುಗಳನ್ನು ಕೆರೆಯ ಬಳಿ ಕಟ್ಟಿ ಆಟವಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಸ್ಥಳೀಯರು ಕೆರೆಯಿಂದ ಮಕ್ಕಳ ಶವವನು ಹೊರ ತೆಗೆದಿದ್ದಾರೆ. ಸ್ಥಳಕ್ಕಾಗಮಿಸಿದ ಹಳೆಬೀಡು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…
ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…
ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…
ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…