ರಾಜ್ಯ

ಹಾಸನ: ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವು

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ಸಾವನ್ನಪ್ಪಿದ್ದ ಘಟನೆ ಹಾಸನದಲ್ಲಿ ಇತ್ತೀಚೆಗೆ ನಡೆದಿತ್ತು. ಈ ದುರಂತ ಮಾಸುವ ಮುನ್ನವೇ ಇದೀಗ ಮತ್ತೊಂದು ಇಂತದ್ದೆ ಘಟನೆ ನಡೆದಿದೆ. ಹಾಸನದ ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ಇಂದು(ಮೇ.31) ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.

ದೀಕ್ಷಿತ್(‌10) ನಿತ್ಯಶ್ರೀ(12) ಕುಸುಮ(6) ಮೃತಪಟ್ಟ ಮಕ್ಕಳು. ಹಸುಗಳನ್ನು ಕೆರೆಯ ಬಳಿ ಕಟ್ಟಿ ಆಟವಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಸ್ಥಳೀಯರು ಕೆರೆಯಿಂದ ಮಕ್ಕಳ ಶವವನು ಹೊರ ತೆಗೆದಿದ್ದಾರೆ.  ಸ್ಥಳಕ್ಕಾಗಮಿಸಿದ  ಹಳೆಬೀಡು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

7 mins ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

5 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

5 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

5 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

16 hours ago