Mysore
21
haze

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ವಿಪಕ್ಷಗಳ ವಿರೋಧದ ಮಧ್ಯೆ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು ಅಂಗೀಕರಿಸಲಾಯಿತು.

ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಈ ಮಸೂದೆಯನ್ನು ಮಂಡಿಸಿದರು. ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ಮಸೂದೆಯ ಪ್ರತಿಯನ್ನು ಹರಿದು ಎಸೆದರು.

ಇದನ್ನು ಓದಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್‌ ಜಿ ಮಸೂದೆ ಅಂಗೀಕಾರ

ಈ ನಡುವೆಯೇ ಸಚಿವ ಪರಮೇಶ್ವರ್‌ ಅವರು ಮಸೂದೆಗೆ ಸದನದ ಅನುಮೋದನೆ ಪಡೆದರು.

ದ್ವೇಷ ಭಾಷಣದ ಮಲಕ ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ನಿವಾಸ, ಅಂಗವೈಕಲ್ಯ, ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಮೂರು ವರ್ಷಗಳ ಕಾಲ ಶಿಕ್ಷೆ ವಿಧಿಸಬಹುದು ಅಥವಾ ಐದು ಸಾವಿರ ರೂ ದಂಡದ ಜೊತೆಗೆ ಶಿಕ್ಷೆ ವಿಧಿಸಬಹುದು.

ರಾಜ್ಯದಲ್ಲಿ ಕೋಮು ದ್ವೇಷದ ಭಾಷಣ ಹೆಚ್ಚಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆ. ಇದನ್ನು ತಡೆಯಲು ಕಠಿಣ ಕ್ರಮ ಒಳಗೊಂಡ ಕಾನೂನು ಅಗತ್ಯಯ ಎಂದು ಸರ್ಕಾರದ ವಾದವಾಗಿದೆ. ಆದ್ದರಿಂದ ಈ ಮಸೂದೆಯನ್ನು ಮಂಡಿಸಲಾಗಿದೆ.

Tags:
error: Content is protected !!