ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು ಅಂಗೀಕರಿಸಲಾಯಿತು.
ಗೃಹ ಸಚಿವ ಜಿ.ಪರಮೇಶ್ವರ್ ಅವರು ಈ ಮಸೂದೆಯನ್ನು ಮಂಡಿಸಿದರು. ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು, ಮಸೂದೆಯ ಪ್ರತಿಯನ್ನು ಹರಿದು ಎಸೆದರು.
ಇದನ್ನು ಓದಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್ ಜಿ ಮಸೂದೆ ಅಂಗೀಕಾರ
ಈ ನಡುವೆಯೇ ಸಚಿವ ಪರಮೇಶ್ವರ್ ಅವರು ಮಸೂದೆಗೆ ಸದನದ ಅನುಮೋದನೆ ಪಡೆದರು.
ದ್ವೇಷ ಭಾಷಣದ ಮಲಕ ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ನಿವಾಸ, ಅಂಗವೈಕಲ್ಯ, ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಮೂರು ವರ್ಷಗಳ ಕಾಲ ಶಿಕ್ಷೆ ವಿಧಿಸಬಹುದು ಅಥವಾ ಐದು ಸಾವಿರ ರೂ ದಂಡದ ಜೊತೆಗೆ ಶಿಕ್ಷೆ ವಿಧಿಸಬಹುದು.
ರಾಜ್ಯದಲ್ಲಿ ಕೋಮು ದ್ವೇಷದ ಭಾಷಣ ಹೆಚ್ಚಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆ. ಇದನ್ನು ತಡೆಯಲು ಕಠಿಣ ಕ್ರಮ ಒಳಗೊಂಡ ಕಾನೂನು ಅಗತ್ಯಯ ಎಂದು ಸರ್ಕಾರದ ವಾದವಾಗಿದೆ. ಆದ್ದರಿಂದ ಈ ಮಸೂದೆಯನ್ನು ಮಂಡಿಸಲಾಗಿದೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…