Mysore
17
broken clouds

Social Media

ಶುಕ್ರವಾರ, 30 ಜನವರಿ 2026
Light
Dark

ರಾಜ್ಯದಲ್ಲಿ ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 5000 ದಂಡ, 3 ವರ್ಷ ಜೈಲು ಶಿಕ್ಷೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್‌ ಆಗಿದೆ.

ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ ಮಾಡಲಾಗಿದ್ದು, ಸಚಿವ ಎಚ್.ಕೆ.ಪಾಟೀಲ್‌ ಅವರು ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಮಂಡಿಸಿದ್ದಾರೆ.

ಇದನ್ನು ಓದಿ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌

ದ್ವೇಷ ಭಾಷಣದ ಮೂಲಕ ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ನಿವಾಸ, ಅಂಗವೈಕಲ್ಯ, ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಮೂರು ವರ್ಷಗಳ ಕಾಲ ಶಿಕ್ಷೆ ವಿಧಿಸಬಹುದು ಅಥವಾ ಐದು ಸಾವಿರ ರೂ ದಂಡದ ಜೊತೆಗೆ ಶಿಕ್ಷೆ ವಿಧಿಸಬಹುದು.

ರಾಜ್ಯದಲ್ಲಿ ಕೋಮು, ದ್ವೇಷದ ಭಾಷಣ ಹೆಚ್ಚಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆ. ಇದನ್ನು ತಡೆಯಲು ಕಠಿಣ ಕ್ರಮ ಒಳಗೊಂಡ ಕಾನೂನು ಅಗತ್ಯ ಎಂಬುದು ಸರ್ಕಾರದ ವಾದವಾಗಿದೆ. ಆದ್ದರಿಂದ ಈ ಮಸೂದೆಯನ್ನು ಮಂಡಿಸಲಾಗಿದೆ.

Tags:
error: Content is protected !!