Mysore
26
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಹಾವೇರಿ ಭೀಕರ ಅಪಘಾತ : ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ಹಾವೇರಿ : ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ 13 ಜನರು ಸಾವನ್ನಪ್ಪಿದ್ದಾರೆ.  ಮೃತರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು  ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಘೋಷನೆ ಮಾಡಿದ್ದಾರೆ.

ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು ಸೇರಿ 13 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ನೀಡುತ್ತೇವೆ ಎಂದರು.

ಅಲ್ಲದೆ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಸಿಎಂ ಸಂತಾಪ ಕೂಡ ಸೂಚಿಸಿದರು.

 

Tags: