ರಾಜ್ಯ

ಹಾವೇರಿ ರಸ್ತೆ ಅಪಘಾತಕ್ಕೆ ಕಾರಣವಾದ ಅಂಶಗಳ ಬಗ್ಗೆ ಅಲೋಕ್ ಕುಮಾರ್ ಟ್ವೀಟ್‌

ಹಾವೇರಿ : ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ 13 ಜನರು ಮೃತಪಟ್ಟಿದ್ದರು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಗಣ್ಯರು ಸಂತಾಪವನ್ನು ಸೂಚಿಸಿದ್ದರು. ಇದೀಗ ಈ ಅಪಘಾತಕ್ಕೆ ಕಾರಣವಾದ ಅಂಶಗಳು ಯಾವುವು ಎಂಬುವುದರ ಬಗ್ಗೆ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕ ಅಲೋಕ್​ ಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ಟ್ವೀಟ್‌ ಮಾಡಿರುವ ಅವರು, ಅಪಘಾತದಲ್ಲಿ 13 ಜನ ಸಾವನ್ನಪ್ಪಿರುವ ವಿಚಾರ ತಿಳಿದು ಬಹಳ ನೋವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಅಪಘಾತಕ್ಕೆ ಏನು ಕಾರಣ ಎಂಬುವುದರ ಬಗ್ಗೆಯೂ ಟ್ವೀಟ್‌ ಮಾಡಿದ್ದು, ತಪ್ಪಾದ ಸ್ಥಳದಲ್ಲಿ ಲಾರಿ ಪಾರ್ಕಿಂಗ್​ ಮಾಡಿರುವುದು, ತಪ್ಪಾಗಿ ಓವರ್‌‌ ಟೇಕಿಂಗ್ ಮಾಡಿರಬಹುದು. ಅಥವಾ ಅತಿಯಾದ ವೇಗ , ಇಲ್ಲ ಚಾಲಕ ಆಯಾಸಗೊಂಡಿದ್ದರಿಂದ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಿದ್ದಾರೆ.

ಇನ್ನು ಅಪಘಾತ ಸ್ಥಳಕ್ಕೆ ಭೇಟಿ ನೀಡುವುದಾಗಿ ಮಾಹಿತಿ ನೀಡಿ, ಜಾಗರೂಕತೆಯಿಂದ ವಾಹನ ಚಲಾಯಿಸಿ, ಜೀವ ರಕ್ಷಿಸಿ ಎಂದು ಬರೆದುಕೊಂಡಿದ್ದಾರೆ.

 

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

3 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

12 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

4 hours ago