ರಾಜ್ಯ

ಅರಣ್ಯ ಸಿಬ್ಬಂದಿಗೆ ಅಪಾಯ ಭತ್ಯೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ವನ್ಯಜೀವಿ ಮತ್ತು ಕಳ್ಳಬೇಟೆಗಾರರ ದಾಳಿಯಿಂದ ಅಪಾಯಕ್ಕೀಡಾಗಿವ ಅರಣ್ಯ ಸಿಬ್ಬಂದಿಗಳಿಗೆ ಅಪಾಯ ಭತ್ಯೆ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದರು.

ಇಂದು (ಫೆ.21) ಅರಣ್ಯ ಭವನದಲ್ಲಿ ಅರಣ್ಯ ಪಡೆಯ ಮುಖ್ಯಸ್ಥೆ ಮೀನಾಕ್ಷಿ ನೇಗಿ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಅವರನ್ನು ಅಭಿನಂದಿಸಿ ಮಾತನಾಡಿದರು.

ಅರಣ್ಯ ಸಿಬ್ಬಂದಿಯ ಬಹು ಬೇಡಿಕೆಗಳಲ್ಲಿ ಒಂದಾಗಿರುವ ಪೊಲೀಸ್‌ ಕ್ಯಾಂಟಿನ್‌ ಮಾದರಿಯ ಕ್ಯಾಂಟೀನ್‌ ವ್ಯವಸ್ಥೆ ಜಾರಿಗೊಳಿಸಲು ಮುಕ್ಯಮಂತ್ರಿಯವರ ಗಮನ ಸೆಳೆಯಲಾಗಿದೆ ಎಂದು ತಿಳಿಸಿದರು.

ಅರಣ್ಯ ಮತ್ತು ಪರಿಸರ ಇಲಾಖೆ ಅತ್ಯಂತ ಮಹತ್ವದ ಇಲಾಖೆ. ಇಡೀ ವಿಶ್ವದ ಜಾಗತಿಕ ತಾಪಮಾನ, ಹವಮಾನ ಬದಲಾವಣೆಯಂತಹ ಸವಾಲುಗಳಿಗೆ ಪರಿಹಾರ ಇರುವುದು ಅರಣ್ಯ ಮತ್ತು ಪರಿಸರ ಇಲಾಖೆಯಲ್ಲಿ ಮಾತ್ರ ಎಂದರು.

ನಾನು ಅರಣ್ಯ ಇಲಾಖೆ ಸಚಿವನಾದ ಮೇಲೆ ಈ ಇಲಾಖೆಯಲ್ಲಿ ಹಲವಾರು ಸುಧಾರಣೆಗಳನ್ನು ತಂದಿದ್ದೇನೆ. ಆನ್‌ಲೈನ್‌,ಎಫ್‌ಐಆರ್‌ ವ್ಯವಸ್ಥೆ, ಕೌನ್ಸೆಲಿಂಗ್‌ ಮೂಲಕ ಟಿಕೆಟ್‌ ಮುಂಗಡ ಕಾಯ್ದಿರಿಸುವ ವ್ಯವಸ್ಥೆ, ಅರಣ್ಯ ಒತ್ತುವರಿ ತೆರವು ಮೊದಲಾದ ಹಲವು ಕ್ರಮಗಳನ್ನು ಕೈಗೊಂಡಿದ್ದೇನೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಮತ್ತಿರರು ಇದ್ದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

2 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

2 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

2 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

2 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

2 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

2 hours ago