ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಷಿಕ್ಯೂಷನ್ ಹೊರಡಿಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಅವರನ್ನು ರಾಜ್ಯಪಾಲ ಸ್ಥಾನದಿಂದ ವಜಾಗೊಳಿಸಬೇಕೆಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌ಸಿ ಮಹದೇವಪ್ಪ ದೂರಿದ್ದಾರೆ.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರು ಅವರು, “ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ ಕುಮಾರಸ್ವಾಮಿಯವರ ಗಣಿ ಹಗರಣದ ವಿರುದ್ಧ ತನಿಖೆ ನಡೆಸಬೇಕೆಂದು ಲೋಕಾಯುಕ್ತ ಸಂಸ್ಥೆ ರಾಜ್ಯಪಾಲರಿಗೆ ಅನುಮತಿ ಕೇಳಿ 10 ತಿಂಗಳಾದರೂ ಮಾನ್ಯ ರಾಜ್ಯಪಾಲರು ಆ ಬಗ್ಗೆ ಸಂಪೂರ್ಣ ಮೌನ ವಹಿಸಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ಸಚಿವೆ ಆಗಿದ್ದ ಶಶಿಕಲಾ ಜೊಲ್ಲೆಯವರ ವಿರುದ್ಧದ ತನಿಖೆಗೆ ಅನುಮತಿ ನೀಡಿ ಎಂದು ಕೋರಿದ್ದ ಕಡತವನ್ನೂ ರಾಜ್ಯಪಾಲರು ಮೂಲೆಗೆ ತಳ್ಳಿದ್ದಾರೆ.
ಸಾಲದು ಎಂಬಂತೆ ಮುರುಗೇಶ್ ನಿರಾಣಿಯವರ ತನಿಖೆಗೆ ಸಂಬಂಧಿಸಿದ ಕಡತವೂ ರಾಜ್ಯಪಾಲರ ಕಚೇರಿಯಲ್ಲಿ ಧೂಳು ಹಿಡಿಯುತ್ತದೆ.
ಪರಿಸ್ಥಿತಿ ಹೀಗಿರುವಾಗ ನ್ಯಾಯಾಲಯದಿಂದಲೇ ಛೀಮಾರಿ ಹಾಕಿಸಿಕೊಂಡ ವ್ಯಕ್ತಿಯೊಬ್ಬ ನೀಡಿರುವ ದೂರನ್ನು ಆಧರಿಸಿ, ರಾತ್ರೋ ರಾತ್ರಿ ನೋಟಿಸ್ ಜಾರಿ ಮಾಡಿ ಈಗ ತನಿಖೆಗೆ ನೀಡಲು ಹೊರಟಿರುವ ರಾಜ್ಯಪಾಲರು, ತಾರತಮ್ಯದಿಂದ ಮತ್ತು ಪೂರ್ವಾಗ್ರಹ ಪೀಡಿತರಾಗಿ ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿದ್ದು ಇವರಿಗೆ ಒಂದು ಕ್ಷಣವೂ ರಾಜ್ಯಪಾಲರಾಗಿ ಮುಂದುವರೆಯುವ ನೈತಿಕತೆ ಇಲ್ಲ.
ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ, ರಾಜಕೀಯ ಪಕ್ಷಗಳ ಹಿತಕ್ಕೆ ಪೂರಕವಾಗಿ ಕೆಲಸ ಮಾಡುತ್ತಿರುವ ಅವರನ್ನು ಮಾನ್ಯ ರಾಷ್ಟ್ರಪತಿಗಳು ಕೂಡಲೇ ವಜಾ ಮಾಡಬೇಕು ಎಂದು ಬರೆದುಕೊಂಡಿದ್ದಾರೆ.
ಬೆಂಗಳೂರು : 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ.…
ಮುಂಬೈ : ಐಪಿಎಲ್ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್) ತಂಡಕ್ಕೆ ನೆರೆಯ ಬಾಂಗ್ಲಾದೇಶದ ಆಟಗಾರನನ್ನು ಖರೀದಿಸಿರುವ ಬಾಲಿವುಡ್…
ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…
ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್ ವಸತಿ ಕಲ್ಪಿಸಬೇಕು ಎಂದು ಶಾಸಕ…
ಸ್ವಿಟ್ಜರ್ಲೆಂಡ್: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…
ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…