ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ನನ್ನ ಪಕ್ಷ ಬದ್ಧ ಎಂದು ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗೌರವವಿದೆ. ವಿಶ್ವದ ಅನೇಕ ರಾಷ್ಟ್ರಗಳ ನಾಯಕರು ಘಟನೆಯನ್ನು ಖಂಡಿಸಿದ್ದಾರೆ. ಆದ್ದರಿಂದ ಮೋದಿ ತೆಗೆದುಕೊಳ್ಳುವ ನಿರ್ಧಾರವನ್ನು ಎಲ್ಲರೂ ಬೆಂಬಲಿಸಬೇಕು. ಇದರಲ್ಲಿ ರಾಜಕೀಯ ಮಾಡಬಾರದು ಎಂದರು.
ಇದನ್ನೂ ಓದಿ:- ಕಾಶ್ಮೀರವನ್ನು ಭಾರತದಿಂದ ಬೇರ್ಪಡಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿ.ಎಂ.ಇಬ್ರಾಹಿಂ
ಇನ್ನು ಮುಂದುವರಿದು ಮಾತನಾಡಿದ ಅವರು, ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಒಗ್ಗಟ್ಟು ಪ್ರದರ್ಶಿಸಿ ಬೆಂಬಲಿಸಬೇಕು. ಖರ್ಗೆ ಅವರು ಮೋದಿ ನಿರ್ಧಾರವನ್ನು ಬೆಂಬಲಿಸಬಹುದು. ನಾನು ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದರು.
ಇದನ್ನೂ ಓದಿ:- ಸಿಎಂ ಸಿದ್ದರಾಮಯ್ಯ ಏಕೆ ಅಷ್ಟೊಂದು ಉದ್ವೇಗಕ್ಕೆ ಒಳಗಾದರು ಎಂಬುದು ಗೊತ್ತಿಲ್ಲ: ಸಚಿವ ಜಿ.ಪರಮೇಶ್ವರ್





