ಬೆಂಗಳೂರು: ಎರಡೂ ಪಕ್ಷಗಳ ಮೈತ್ರಿ, ವಿಧಾನ ಪರಿಷತ್ʼನ 6 ಸ್ಥಾನಗಳ ಚುನಾವಣೆ, ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಸೇರಿ ಹಲವಾರು ವಿಷಯಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಜೆಡಿಎಸ್ ನಾಯಕರ ತಂಡವು ರಾಜ್ಯ ಬಿಜೆಪಿ ನಾಯಕರ ಜತೆ ಮಹತ್ವದ ಚರ್ಚೆ ನಡೆಸಿತು.
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಜಾತ್ಯತೀತ ಜನತಾದಳದ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ, ವಿಧಾನ ಪರಿಷತ್ ಸದಸ್ಯರಾದ ಭೋಜೆಗೌಡರು, ಕೆ.ಎ.ತಿಪ್ಪೇಸ್ವಾಮಿ ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು.
ಹಾಗೆಯೇ ಬಿಜೆಪಿ ವತಿಯಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡರು, ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಆರ್.ಅಶೋಕ, ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರುಗಳು ಭಾಗವಹಿಸಿದ್ದರು.
ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಯಡಿಯೂರಪ್ಪ ಅವರ ಮನೆಯಲ್ಲಿ ಎರಡೂ ಪಕ್ಷಗಳ ಪ್ರಮುಖ ನಾಯಕರು ಮಾತನಾಡಿದ್ದೇವೆ.
ಪ್ರಥಮ ಹಂತದಲ್ಲಿ ಮೊದಲ ಸಭೆ ಮಾಡಿದ್ದೇವೆ. ಮುಂದೆ ವಿಧಾನ ಪರಿಷತ್ ಉಪ ಚುನಾವಣೆ ಇದೆ. ಅಭ್ಯರ್ಥಿ ಆಯ್ಕೆ ಚರ್ಚೆ ಮಾಡಿದ್ದೇವೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ʼಗೆ ಮಾಹಿತಿ ನೀಡುತ್ತೇವೆ.
ಮುಂದಿನ ಲೋಕಸಭೆ ಚುನಾವಣೆಗೆ ಇಲ್ಲಿಂದಲೇ ಸಂದೇಶ ಕೊಡಲಿದ್ದೇವೆ. ಮೋದಿ ಅವರ ಕೈ ಬಲಪಡಿಸಲು ಒಟ್ಟಾಗಿ ಹೋಗುತ್ತೇವೆ. ರಾಜ್ಯದಲ್ಲಿ ಕೆಟ್ಟ ಸರ್ಕಾರ ಇದೆ, ಅದು ತೊಲಗಬೇಕು ಎಂದರು.
ರಜೆ ಘೋಷಣೆಗೆ ಆಗ್ರಹ: ನಾವು ಕೂಡ ಅಯೋಧ್ಯೆಗೆ ಹೋಗುತ್ತೇವೆ. ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮಾಡುವ ದಿನ, ಅಂದರೆ ಸೋಮವಾರ ರಾಜ್ಯ ಸರಕಾರ ರಜೆ ಘೋಷಣೆ ಮಾಡಬೇಕು ಎನ್ನುವುದು ಜನರ ಭಾವನೆ. ಆ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆ ಮಾಡಬೇಕು ಎನ್ನುವುದು ಎಲ್ಲರ ಆಕಾಂಕ್ಷೆ. ಇದು ನಾಡಿನ ಕಾರ್ಯಕ್ರಮ, ದೇಶದ ಕಾರ್ಯಕ್ರಮ. ಹೀಗಾಗಿ ರಜೆ ಘೋಷಣೆ ಮಾಡಲು ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಈಗಾಗಲೇ ಅನೇಕ ರಾಜ್ಯಗಳು ರಜಾ ಘೋಷಣೆ ಮಾಡಿವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…
ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್ ವಿಚಾರ ಬಾಯ್ಬಿಟ್ಟಿದ್ದಾನೆ.…
ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…