Mysore
24
few clouds

Social Media

ಶನಿವಾರ, 14 ಮಾರ್ಚ್ 2026
Light
Dark

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಇಂದು(ಜೂ.15) ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮ ನೀಡಿದ್ದಾರೆ.

ಪ್ರಸ್ತುತ 2024 ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಹಿನ್ನಲೆ ಚನ್ನಪಟ್ಟಣದ ವಿಧಾನಸಭೆ ಕ್ಷೇತ್ರಸ ಶಾಸಕ ಸ್ಥಾನಕ್ಕೆ ಎಚ್.ಡಿ ಕುಮಾರಸ್ವಾಮಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

ವಿಧಾನಸಭೆ ಸ್ಪೀಕರ್‌ ಕಚೇರಿಗೆ ಆಗಮಿಸಿ, ಸ್ಪೀಕರ್‌ ಯು.ಟಿ ಖಾದರ್‌ ಅವರನ್ನು ಭೇಟಿಯಾಗಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ರಾಜೀನಾಮೆ ಸಲ್ಲಿಸಿದರು. ಈ ವೇಳೆ ಶಾಸಕ ಜಿಟಿ ದೇವೇಗೌಡ, ವಿಧಾನ ಪರಿಷತ್‌ ಸದಸ್ಯ ಭೋಜೇಗೌಡ ಉಪಸ್ಥಿತರಿದ್ದರು.

ಬಳಿಕ ಮಾಧ್ಯಮ ಸುದ್ದಿಗಾರರೊಂದಿಗೆ ಮಾತನಾಡಿ, ಸಂಸದರಾಗಿ ಆಯ್ಕೆಯಾದ ಮೇಲೆ ಒಂದೇ ಸ್ಥಾನ ಉಳಿಸಿಕೊಳ್ಳಬೇಕು. ಹೀಗಾಗಿ ರಾಜೀನಾಮೆ ನೀಡಿದ್ದೇನೆ. ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮುಂದೆ ಮಾತನಾಡೋಣ. ಡಿ.ಕೆ ಸುರೇಶ್‌ ದೊಡ್ಡವರು ಏನಾದರೂ ಮಾಡಿಕೊಳ್ಳಲಿ ಬಿಡಿ ಎಂದರು.

ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಥಿಸಿ ಅಭೂತಪೂರ್ವ ಗೆಲುವು ಕಂಡಿರುವ ಎಚ್.ಡಿ ಕುಮಾರಸ್ವಾಮಿ ಇದೀಗ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಬೃಹತ್‌ ಮತ್ತು ಉಕ್ಕು ಖಾತೆಯ ಸಚಿವರಾಗಿದ್ದಾರೆ.

 

Tags:
error: Content is protected !!