ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಇಂದು(ಜೂ.15) ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮ ನೀಡಿದ್ದಾರೆ.
ಪ್ರಸ್ತುತ 2024 ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಹಿನ್ನಲೆ ಚನ್ನಪಟ್ಟಣದ ವಿಧಾನಸಭೆ ಕ್ಷೇತ್ರಸ ಶಾಸಕ ಸ್ಥಾನಕ್ಕೆ ಎಚ್.ಡಿ ಕುಮಾರಸ್ವಾಮಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ವಿಧಾನಸಭೆ ಸ್ಪೀಕರ್ ಕಚೇರಿಗೆ ಆಗಮಿಸಿ, ಸ್ಪೀಕರ್ ಯು.ಟಿ ಖಾದರ್ ಅವರನ್ನು ಭೇಟಿಯಾಗಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ರಾಜೀನಾಮೆ ಸಲ್ಲಿಸಿದರು. ಈ ವೇಳೆ ಶಾಸಕ ಜಿಟಿ ದೇವೇಗೌಡ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಉಪಸ್ಥಿತರಿದ್ದರು.
ಬಳಿಕ ಮಾಧ್ಯಮ ಸುದ್ದಿಗಾರರೊಂದಿಗೆ ಮಾತನಾಡಿ, ಸಂಸದರಾಗಿ ಆಯ್ಕೆಯಾದ ಮೇಲೆ ಒಂದೇ ಸ್ಥಾನ ಉಳಿಸಿಕೊಳ್ಳಬೇಕು. ಹೀಗಾಗಿ ರಾಜೀನಾಮೆ ನೀಡಿದ್ದೇನೆ. ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮುಂದೆ ಮಾತನಾಡೋಣ. ಡಿ.ಕೆ ಸುರೇಶ್ ದೊಡ್ಡವರು ಏನಾದರೂ ಮಾಡಿಕೊಳ್ಳಲಿ ಬಿಡಿ ಎಂದರು.
ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಥಿಸಿ ಅಭೂತಪೂರ್ವ ಗೆಲುವು ಕಂಡಿರುವ ಎಚ್.ಡಿ ಕುಮಾರಸ್ವಾಮಿ ಇದೀಗ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಬೃಹತ್ ಮತ್ತು ಉಕ್ಕು ಖಾತೆಯ ಸಚಿವರಾಗಿದ್ದಾರೆ.
ಜನವರಿ ಮೊದಲ ವಾರದ ವೇಳೆಗೆ ಪುನಃ ಶುರುವಾಗಲಿದೆ ಬಂಡಾಯದ ಬಿರುಗಾಳಿ ರಾಜ್ಯ ಕಾಂಗ್ರೆಸ್‌ನ ಗೊಂದಲಕ್ಕೆ ಬ್ರೇಕ್ ಹಾಕಲು ದಿಲ್ಲಿಯ ಕಾಂಗ್ರೆಸ್…
ಚಾಮರಾಜಗರ ಜಿಲ್ಲೆಯ ಪವಿತ್ರ ಯಾತ್ರಾ ಸ್ಥಳವಾದ ಮೇಲೆ ಮಹದೇಶ್ವರ ಬೆಟ್ಟದ ಅಸುಪಾಸಿನಲ್ಲಿ ವಾಸಿಸುವ ಒಡಕಟ್ಟು ಜನರು ಮದ್ಯವ್ಯಸನಿಗಳಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವ…
ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…
ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…
ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…