ಬೆಂಗಳೂರು: ನನ್ನ ತಂದೆ ಆರೋಗ್ಯ ಲೆಕ್ಕಿಸದೇ ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ.
ಬೆಂಗಳೂರಿನಲ್ಲಿ ಬಿಜೆಪಿ ಪಾದಯಾತ್ರೆ ಕುರಿತು ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವ ಆಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ನೀಡಲಾಯಿತು. ಸದ್ಯ ಕುಮಾರಸ್ವಾಮಿ ಅವರು ಆರೋಗ್ಯದಿಂದ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಪುತ್ರ ನಿಖಿಲ್ ಕುಮಾರಸ್ವಾಮಿ ಮಾಹಿತಿ ನೀಡಿದ್ದು, ಕಳೆದ 15 ದಿನಗಳಿಂದ ಕುಮಾರಸ್ವಾಮಿ ಅವರು ನಿರಂತರ ಓಡಾಟ ನಡೆಸಿದ್ದಾರೆ. ಕೆಲಸದ ಒತ್ತಡದಿಂದ ಮೂಗಿನಲ್ಲಿ ರಕ್ತಸ್ರಾವ ಆಗಿದೆ. ಅವರ ಆರೋಗ್ಯದಲ್ಲಿ ಏನು ಸಮಸ್ಯೆಯಿಲ್ಲ. ಕೆಲಸದ ಒತ್ತಡದ ನಡುವೆ ಬೆಳಿಗ್ಗೆ 4.30ಕ್ಕೆ ಎದ್ದೇಳುತ್ತಿದ್ದರು. ಮಲಗೋದು ರಾತ್ರಿ 1 ಗಂಟೆ ಆಗುತ್ತಿತ್ತು. ಹೀಗಾಗಿ ಅವರಿಗೆ ವಿಶ್ರಾಂತಿಯ ಅವಶ್ಯಕತೆಯಿದೆ. ಡಾಕ್ಟರ್ ಕೂಡ ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.
ಇನ್ನು ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯ ಯತೀಶ್ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ ಅವರಿಗೆ ಮೂರು ಸಲ ಹೃದಯದ ಚಿಕಿತ್ಸೆ ನೀಡಲಾಗಿದೆ. ಯಾರೂ ಏನೂ ಆತಂಕ ಪಡುವ ಅಗತ್ಯವಿಲ್ಲ. ಅವರು ಅಡ್ಮಿಷನ್ ಆಗಿಲ್ಲ. ತಪಾಸಣೆ ಮುಗಿಸಿ ಹೊರಡುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…