ರಾಜ್ಯ

ಗುಂಡಿಗಳ ಬಗ್ಗೆ ಡಿಸಿಎಂ ಕೇಳಿ ಎಂದ ಸಿಎಂಗೆ ಎಚ್.ಡಿ. ಕುಮಾರಸ್ವಾಮಿ ತರಾಟೆ

ಬೆಂಗಳೂರು: ನಗರದಲ್ಲಿ ಗುಂಡಿ ಮುಚ್ಚಲು ವಿಧಿಸಿರುವ ಡೆಡ್ ಲೈನ್ ಮುಗಿದಿದ್ದರೂ ಇನ್ನು ಗುಂಡಿಗಳು ಹಾಗೆಯೇ ಇವೆ. ಆ ಬಗ್ಗೆ ಮಾಧ್ಯಮಗಳು ಕೇಳಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಕೇಳಿ ಎಂದಿರುವುದು ಬೇಜವಾಬ್ದಾರಿಯ ಪರಮಾವಧಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಶುಕ್ರವಾರದ ದಿನ ಮುಖ್ಯಮಂತ್ರಿಗಳ ಹೇಳಿಕೆ ಗಮನಿಸಿದ್ದೇನೆ. ಅವರ ಹೇಳಿಕೆ ಬೇಜವಾಬ್ದಾರಿತನದ್ದು ಎಂಬುದು ನನ್ನ ಅಭಿಪ್ರಾಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾ? ಅಥವಾ ಡಿ.ಕೆ. ಶಿವಕುಮಾರ್ ಅವರಾ? ಎನ್ನುವ ಪ್ರಶ್ನೆ ಬರುತ್ತೆ. ಮುಖ್ಯಮಂತ್ರಿಗಳೇ ಸಭೆ ಮಾಡಿ ಗುಂಡಿ ಮುಚ್ಚಲು ಡೆಡ್ ಲೈನ್ ಕೊಟ್ಟಿದ್ದರು. ಆದರೆ ರಸ್ತೆಗಳಲ್ಲಿ ಗುಂಡಿಗಳು ಹಾಗೆಯೇ ಇವೆ. ಮುಖ್ಯಮಂತ್ರಿಗಳ ಮಾತಿಗೂ ಸಹ ಎಷ್ಟು ಬೆಲೆ ಅಧಿಕಾರಿಗಳು ಕೊಡುತ್ತಿದ್ದಾರೆ ಎನ್ನುವುದು ಇದರಿಂದ ಗೊತ್ತಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳ ಹೇಳಿಕೆ ನೋಡಿದಾಗ ಅವರು ಈ ರಾಜ್ಯದ ಸಿಎಂ ಆಗಿ ಕಾರ್ಯ ನಿರ್ವಹಣೆ ಮಾಡುವುದಕ್ಕೆ ಅಸಮರ್ಥ ಆಗಿದ್ದೇನೆ ಎಂದು ಹೇಳಿದ ರೀತಿ ಇದೆ. ಅವರು ಇಂಥ ಹೇಳಿಕೆ ನೀಡಬಾರದು ಎಂದು ಅವರು ಹೇಳಿದರು.

ಇದನ್ನು ಓದಿ: ಗುಂಡಿ ಜಟಾಪಟಿ : ಡಿನ್ನರ್‌ ಮೀಟಿಂಗ್‌ ಬಳಿಕ ಡಿಕೆಶಿಯನ್ನು ಹಾಡಿ ಹೊಗಳಿದ ಉದ್ಯಮಿಗಳು

ನವೆಂಬರ್ ಕ್ರಾಂತಿ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟಿದ್ದು:ನವೆಂಬರ್ 21ಕ್ಕೆ ಡಿಕೆ ಶಿವಕುಮಾರ್ ಸಿಎಂ ಆಗಿ ಪದಗ್ರಹಣ ಮಾಡುತ್ತಾರೆ ಎಂಬ ಚರ್ಚೆ ಬಗ್ಗೆ ಗಮನ ಸೆಳೆದಾಗ, ಅದು ಅವರ ಪಕ್ಷದಲ್ಲಿನ ತೀರ್ಮಾನಗಳು. ಅವರಿಗೆ ಬಿಟ್ಟಿರೋದು, ನಾನು ಈ ವಿಷಯದಲ್ಲಿ ಮಾತಮಾಡುವುದು ಸಣ್ಣತನ ಆಗುತ್ತದೆ. ಅವರ ಪಕ್ಷದಲ್ಲಿ ಏನು ತೀರ್ಮಾನ ಮಾಡುತ್ತಾರೋ ಮಾಡಿಕೊಳ್ಳಲಿ ಎಂದರು.

ಸರ್ಕಾರದ ಅವಧಿ ಇನ್ನು ಎರಡೂವರೆ ವರ್ಷ ಇದೆ. ಆದರೆ ಎರಡೂವರೆ ವರ್ಷ ಸರ್ಕಾರ ನಡೆಸುವಲ್ಲಿ ಕಾಂಗ್ರೆಸ್ ನವರೇ ಪ್ರತಿನಿತ್ಯ ನಗೆಪಾಟಿಗೆ ಒಳಗಾಗುತ್ತಿದ್ದಾರೆ. ವಿರೋಧ ಪಕ್ಷಗಳು ಮಾತಾಡುವ ಅವಶ್ಯಕತೆ ಇಲ್ಲ. ಮಂತ್ರಿಗಳು, ಜವಾಬ್ದಾರಿ ಸ್ಥಾನದಲ್ಲಿ ಇರುವವರು ಅವರವರೇ ಮಾತನಾಡುತ್ತಿರುವಾಗ ನಾವು ಯಾವ ದೃಷ್ಟಿಯಿಂದ ನೋಡೋದು? ಅವರ ಭಿನ್ನಮತ ನೋಡುವ ಅಗತ್ಯ ಎನ್ಡಿಎ ಮೈತ್ರಿಕೂಟಕ್ಕೆ ಇಲ್ಲ. ಅವರ ಪಕ್ಷದಲ್ಲಿರುವ ಶಾಸಕರು, ಮಂತ್ರಿಗಳೇ ದೊಡ್ಡ ಮಟ್ಟದಲ್ಲಿ ನೋಡ್ತಾ ಇದ್ದಾರೆ ಎಂದು ಕೇಂದ್ರ ಸಚಿವರು ವ್ಯಂಗ್ಯವಾಡಿದರು.

ಮನೆಗಳ ಮುಂದೆ ಕಸ; ಸರ್ಕಾರದ ಹೊಸ ಕಾರ್ಯಕ್ರಮ ಎಂದು ಲೇವಡಿ ಬಿಬಿಎಂಪಿ ಸಿಬ್ಬಂದಿ ಮನೆಗಳ ಮುಂದೆ ಕಸ ಸುರಿಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು; ಮನೆಗಳ ಮುಂದೆ ಕಸ ಹಾಕುವುದನ್ನು ನಾನು ಮಾಧ್ಯಮಗಳಲ್ಲಿ ಗಮನಿಸಿದೆ. ಜನರು ಕಸ ಬೀದಿಯಲ್ಲಿ ಹಾಕಿದರು ಎಂದು ಬೀದಿಯಲ್ಲಿರೋ ಕಸ ತಂದು ಜನರ ಮನೆ ಮುಂದೆ ಹಾಕಿದರೆ ಅರ್ಥ ಇದೀಯಾ? ಅದರಿಂದ ಏನು ಸಾಧನೆ ಮಾಡುತ್ತಾರೆ. ಸರಕಾರ ಸರಿಯಾದ ರೀತಿಯಲ್ಲಿ ಕಸ ವಿಲೇವಾರಿ ಮಾಡುವ ಜವಾಬ್ದಾರಿ ಮಾಡುವಲ್ಲಿ ವೈಜ್ಞಾನಿಕ ತೀರ್ಮಾನ ಮಾಡಬೇಕು. ಅದು ಬಿಟ್ಟು ಲಾರಿಯಲ್ಲಿ ಕಸ ತುಂಬಿಕೊಂಡು ಒಂದು ಮನೆ ಮುಂದೆ ಹೊರಗಡೆ ಹಾಕುವುದು ಎಷ್ಟು ಸರಿ? ಸರ್ಕಾರಕ್ಕೆ ಸಮಸ್ಯೆ ಇದೆ, ಅವರಿಗೆ ಕಸ ವಿಲೇವಾರಿ ಮಾಡುವುದಕ್ಕೆ ಜಾಗ ಇಲ್ಲ. ಅದಕ್ಕೆ ಮನೆಗಳ ಮುಂದೆ ತಂದು ಹಾಕಿದರೆ ಜನರೇ ಕಸ ವಿಲೇವಾರಿ ಮಾಡಿಕೊಳ್ಳುತ್ತಾರೆ ಎನ್ನುವ ಭಾವನೆ ಇರಬಹುದು. ಆ ಉದ್ದೇಶದಿಂದ ಸರ್ಕಾರ ಮನೆಗಳ ಮುಂದೆ ಕಸ ಸುರಿಯುವ ಹೊಸ ವಿನೂತನ ಕಾರ್ಯಕ್ರಮ ಮಾಡಿದೆ ಎಂದು ಹೆಚ್ಡಿಕೆ ಕಿಡಿಕಾರಿದರು.

ಸುರಂಗ ರಸ್ತೆ ಬಗ್ಗೆ ಪ್ರತಿಕ್ರಿಯೆ: ಸುರಂಗ ಯೋಜನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ ಅವರು, ನೋಡೋಣ.. ಇವರು ಟನಲ್ ರಸ್ತೆ ಕೆಲಸ ಯಾವಾಗ ಪ್ರಾರಂಭ ಮಾಡುತ್ತಾರೆ ಎಂದು. ನುರಿತ ತಜ್ಞರು ಅಭಿಪ್ರಾಯ ಪಡೆದು ಕೆಲಸ ಆರಂಭ ಮಾಡುತ್ತಾರೋ ಅಥವಾ ಹಾಗೆಯೇ ಕಾಮಗಾರಿ ಆರಂಭ ಮಾಡುತ್ತಾರೋ ನೋಡೋಣ. ನಾನು ಹೇಳೋದು ಬೆಂಗಳೂರು ಜನರ ಪ್ರತಿನಿತ್ಯ ಜನರ ಸಮಸ್ಯೆ ಬಗ್ಗೆ. ಅದು ಬಗೆಹರಿಯಬೇಕು. ಇಲ್ಲಿ ಟನಲ್ ರೋಡ್ ಮಾಡ್ತಾರೋ, ಎಲಿವೆಟೆಡ್ ರಸ್ತೆ ಮಾಡುತ್ತಾರೋ ಅದು ಸರ್ಕಾರಕ್ಕೆ ಬಿಟ್ಟಿದ್ದು. ಜನರು ಪ್ರತಿನಿತ್ಯ ಜನಪ್ರತಿನಿಧಿಗಳು ಮತ್ತು ಸರ್ಕಾರದ ವೈಫಲ್ಯಗಳ ಬಗ್ಗೆ ಆಕ್ರೋಶ ಹೊರ ಹಾಕುತ್ತಿದ್ದಾರೆ. ಜನರ ಬದುಕಿನಲ್ಲಿ ಚಲ್ಲಾಟ ಆಡಬೇಡಿ ಎಂದು ಕುಮಾರಸ್ವಾಮಿ ಅವರು ಕಿವಿಮಾತು ಹೇಳಿದರು.

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ರಾಜ್ಯದಲ್ಲಿ ಮತ್ತು ಬೆಂಗಳೂರಿನಲ್ಲಿ ಬೇಕಾದಷ್ಟು ನಡೆಯುತ್ತಿದೆ. ಮಾತನಾಡುವುದಕ್ಕೆ ಬೇಕಾದಷ್ಟು ವಿಷಯ ಇದೆ. ಜನ 70, 80 ವರ್ಷಗಳ ಕಾಲ ಕಷ್ಟಪಟ್ಟು ಸಂಪಾದನೆ ಮಾಡಿ ಆಸ್ತಿಯನ್ನ ದೋಚುತ್ತಿದ್ದಾರೆ. ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ. ಇದಕ್ಕೆಲ್ಲ ಅಂತ್ಯ ಹಾಡುವ ಕಾಲ ಬರುತ್ತದೆ ಎಂದು ಅವರು ಹೇಳಿದರು.

ಇದನ್ನು ಓದಿ: ಇಬ್ಬರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ

ಮಧ್ಯಂತರ ಚುನಾವಣೆಗೆ ನಾವು ರೆಡಿ ಎಂಬ ಆರ್.ಅಶೋಕ್ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು; ಅವರು ಸಿದ್ಧ ಎಂದರೆ ನಾವು ಸಿದ್ಧವೇ. ಚುನಾವಣೆ ಬಂದರೆ ಎದುರಿಸಬೇಕಲ್ಲವೇ? ಸರ್ಕಾರ ಬಿದ್ದುಹೋದರೆ ನಾವು ತಯಾರು ಆಗಬೇಕು. ನಮ್ಮದು ಜವಾಬ್ದಾರಿ ಇದೆ. ಆದರೆ, ನಾನು ಮಧ್ಯಂತರ ಚುನಾವಣೆಯ ಬಗ್ಗೆ ಚರ್ಚೆ ಮಾಡೋಕೆ ಹೋಗಲ್ಲ. ಈ ಸರ್ಕಾರಕ್ಕೆ ಸಂಪೂರ್ಣ 136 ಶಾಸಕರು ಇದ್ದಾರೆ. ಅವರಲ್ಲಿರುವ ಭಿನ್ನಮತ ಬಗೆಹರಿಸಿಕೊಂಡರೆ ಸರ್ಕಾರ ಪೂರ್ಣಾವಧಿ ಕಾಲ ಇರುತ್ತದೆ. ಇಲ್ಲವಾದರೆ ಹೋಗುತ್ತದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ ಅವಧಿ ಮುಕ್ತಾಯ ಆಗಿರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಸಮೀಕ್ಷೆಯಿಂದ ಏನು ಸಾಧನೆ ಮಾಡುತ್ತಾರೆ ಇವರು? ಅದರಲ್ಲಿ ಎಷ್ಟರಮಟ್ಟಿಗೆ ಸಮೀಕ್ಷೆ ನಡೆಸಿದ್ದಾರೆ? ಎಷ್ಟರಮಟ್ಟಿಗೆ ಜನ ಆ ಸಮೀಕ್ಷೆಗೆ ಸ್ಪಂದಿಸಿದ್ದಾರೆ?

ಸಮಾಜದಲ್ಲಿ ಯಾರೆಲ್ಲಾ ಬಡತನದಲ್ಲಿ ಇದ್ದಾರೆ ಎನ್ನುವುದು ಗಮನಿಸಬೇಕು. ಇಲ್ಲಿ ಜಾತಿ ಪ್ರಶ್ನೆ ಅಲ್ಲ. ಎಲ್ಲ ಜಾತಿಯಲ್ಲಿಯು ಬಡವರಿದ್ದಾರೆ. ಮೊದಲು ಶಿಕ್ಷಣ ಕೋಡುವ ಕೆಲಸ ಮಾಡಬೇಕು. ಇವತ್ತು ರಾಜ್ಯದಲ್ಲಿ 63 ಸಾವಿರ ಶಿಕ್ಷಕರ ಕೊರತೆ ಇದೆ ಎನ್ನುವ ಮಾಧ್ಯಮ ವರದಿ ನೋಡಿದೆ.

ನಿಮ್ಮ ಬೆಂಗಳೂರು ನಗರ ವಿವಿಯಲ್ಲಿ ಶೇ.94ರಷ್ಟು ಬೋಧಕರ ಹುದ್ದೆಗಳು ಖಾಲಿ ಇವೆ ಎನ್ನುವ ಮಾಧ್ಯಮ ವರದಿಯನ್ನು ಗಮನಿಸಿದೆ. ಅಲ್ಲೆಲ್ಲ ಹುದ್ದೆಗಳನ್ನು ಖಾಲಿ ಬಿಟ್ಟು ಸರ್ಕಾರ ಯಾವ ಸಮೀಕ್ಷೆ ಮಾಡಿ ಏನು ಸಾಧನೆ ಮಾಡುತ್ತೆ. ಸರ್ಕಾರದಲ್ಲಿ ಹಲವಾರು ಲೋಪದೋಷಗಳು ಇವೆ. ಕಾಂಗ್ರೆಸ್ ಪಕ್ಷದ ಹಿಡನ್ ಅಜೆಂಡಾಗಳಿಗೆ ಮಾಡಿರುವ ಸಮೀಕ್ಷೆ ಇದು. ನಾಡಿನ ಜನತೆ ಉದ್ದಾರಕ್ಕೆ ಮಾಡಿರೋ ಸಮೀಕ್ಷೆ ಅಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

7 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

7 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

8 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

9 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

10 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

11 hours ago