ರಾಜ್ಯ

ರಾಮನಗರ ಹೆಸರು ಬದಲಾವಣೆ ; ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?

ಹೊಸದಿಲ್ಲಿ : ಐತಿಹಾಸಿಕ ಮಹತ್ವ ಹೊಂದಿರುವ ರಾಮನಗರ ಹೆಸರನ್ನು ಕಿತ್ತುಹಾಕಿ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು.

ಇವರೇನು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರೆಯೇ ಎಂದು ಕಿಡಿಕಾರಿರುವ ಅವರು; ಮುಂದೆ ಪರಿಸ್ಥಿತಿ ಬದಲಾಗಲಿದೆ. ಆಗ ಇವರು ಇಟ್ಟಿರುವ ಹೆಸರೂ ಬದಲಾಗಲಿದೆ ಎಂದು ಎಚ್ಚರಿಕೆ ನೀಡಿದರು.

ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು ಅವರು.

2007 ರಲ್ಲಿ ನಾನು ತೀರ್ಮಾನ ಮಾಡುವಾಗ ಆಗ ವಿರೋಧ ಮಾಡಬಹುದಾಗಿತ್ತು ಆಗ ಮಾಡಲಿಲ್ಲ. ಈ ರಾಜ್ಯಕ್ಕೆ ಮೂವರು ಮುಖ್ಯಮಂತ್ರಿಗಳನ್ನು ರಾಮನಗರ ಕೊಟ್ಟಿದೆ. ಇಡೀ ಜಗತ್ತೇ ನಿಬ್ಬೆರಗಾಗುವ ವಿಧಾನಸೌಧವನ್ನು ಕೆಂಗಲ್ ಹನುಮಂತಯ್ಯ ಅವರು ಕಟ್ಟಿಸಿದ್ದರು. ನೆಹರು ಅವರಿಗೆ ಸಡ್ಡು ಹೊಡೆದು ರಾಜಕೀಯ ಮಾಡಿದ್ದರು. ಅಂತಹ ಮಹನೀಯರ ಹೆಸರನ್ನಾದರೂ ಜಿಲ್ಲೆಗೆ ಇಡಬಹುದಿತ್ತು. ಅವರ ಹೆಸರು ಇಟ್ಟಿದ್ದಿದ್ದರೆ ನಾನು ಅಭಿನಂದಿಸುತ್ತಿದ್ದೆ. ಕೆಂಗಲ್ ಅವರ ಹೆಸರಿಟ್ಟರೆ ಇವರ ಭೂಮಿಗಳಿಗೆ ಬೆಲೆ ಬರುವುದಿಲ್ಲವಲ್ಲ? ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ರಾಮನಗರ ಹೆಸರನ್ನು ತೆಗೆದುಹಾಕಿ ಬೆಂಗಳೂರು ದಕ್ಷಿಣ ಎಂದು ಹೆಸರು ಇಟ್ಟುಕೊಂಡಿರುವುದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ಭೂಮಿಗಳ ಬೆಳೆಯನ್ನು ಏರಿಸುವ ಷಡ್ಯಂತ್ರದ ಭಾಗವಾಗಿದೆ ಎಂದು ಅವರು ಟೀಕಾ ಪ್ರಹಾರ ನಡೆಸಿದರು.

ಅವರು ಏತಕ್ಕಾಗಿ ಜಿಲ್ಲೆಯ ಹೆಸರು ಬದಲಿಸಿದ್ದಾರೆ? ಅದರ ಹಿಂದಿನ ದುರುದ್ದೇಶ ಏನಿದೆ? ಎಂಬುದು ಗೊತ್ತಿದೆ. ಇದರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಯಾವಾಗ ಅದಕ್ಕೆ ತಿರುಗಿಸಿ ಉತ್ತರ ಕೊಡಬೇಕೋ ಆಗ ಕೊಡುತ್ತೇನೆ ಎಂದು ಕೇಂದ್ರ ಸಚಿವರು ತಿರುಗೇಟು ಕೊಟ್ಟರು.

ಇಂತಹ ರಾಜಕಾರಣಕ್ಕೆ ನಾನು ಸೊಪ್ಪು ಹಾಕುವುದಿಲ್ಲ. ಇವರು ಕೇಂದ್ರ ಗೃಹ ಸಚಿವರಿಗೆ ಹೆಸರು ಬದಲಾವಣೆ ರಾಜ್ಯ ಸರ್ಕಾರ ಪ್ರಸ್ತಾಪ ಕಳಿಸಿದ್ದು, ಅದು ತಿರಸ್ಕೃತವಾಗಿದ್ದು ನನಗೆ ಗೊತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಇವರು ಮಾಡಿದ್ದು ಮುಂದೆ ಬದಲಾಗಲಿದೆ ಇವರೇನು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರೆಯೇ? ಇವರು ಮಾಡಿದ್ದು ಮುಂದೆ ಬದಲಾಗಲಿದೆ. ಅದೂ ನನಗೆ ಗೊತ್ತಿದೆ. ಹೇಳಿ ಕೇಳಿ ಈ ವ್ಯಕ್ತಿ ರಿಯಲ್ ಎಸ್ಟೇಟ್ ವ್ಯಾಪಾರಿ. ಏನೆಲ್ಲಾ ತಂತ್ರಗಾರಿಕೆ ಹೂಡಿದರೆ ತಮ್ಮ ಜಮೀನುಗಳಿಗೆ ಬೆಲೆ ಬರುತ್ತಿದೆ ಎನ್ನವುದು ಅವರಿಗೆ ಗೊತ್ತಿದೆ. ರಾಮನಗರ ಜಿಲ್ಲೆಯಾದಾಗಲೇ ರೈತರ ಭೂಮಿಗೆ ಬೆಲೆ ಬಂದಿರಲಿಲ್ಲವೇ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.

ನನ್ನ ಜಮೀನಿಗೆ ಬೆಲೆ ಬರುತ್ತದೆ ಎಂದು ಅವರು ಹೇಳಿದ್ದಾರೆ. ಆ ಜಮೀನನ್ನು ಕೂಡ ಕಿತ್ತುಕೊಳ್ಳಲು ಕುತಂತ್ರ ಮಾಡಿದ್ದಾರೆ ಇವರು. 40 ವರ್ಷಗಳ ಹಿಂದೆ ಖರೀದಿ ಮಾಡಿದ ಜಮೀನಿಗೆ ಎಸ್ಐಟಿ ಅಂತ ರಚನೆ ಮಾಡಿಕೊಂಡು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ನನಗೆ ಕಿರುಕುಳ ಕೊಡುತ್ತಿದ್ದಾರೆ. ಇದರ ವಿರುದ್ಧ ನಾನೂ ಕಾನೂನು ಹೋರಾಟ ಮಾಡುತ್ತಿದ್ದೇನೆ ಎಂದು ಕೇಂದ್ರ ಸಚಿವರು ಹೇಳ್ದರು.

ಇವರು ನನ್ನ ವಿರುದ್ಧ ಕಿರುಕುಳ, ಕುತಂತ್ರ ಮಾಡುತ್ತಿದ್ದಾರೆ. ಹೀಗೆಯೇ ಅವರು ಮಾಡುತ್ತಿರಲಿ, ಇವರು ಲೂಟಿ ಹೊಡೆದಿರುವ ಶೇ.50ರಷ್ಟು ಸರ್ಕಾರಿ ಭೂಮಿಗಳಿವೆ. ಇವರು ಏನೆಲ್ಲಾ ಅನ್ಯಾಯ, ಅಕ್ರಮ ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ಶಾಂತಿನಗರದ ದಲಿತರ ಜಾಗ ನುಂಗಿದ್ದು ಯಾರು? ರಾಮಕೃಷ್ಣ ಹೆಗಡೆ ಅವರ ಸರ್ಕಾರದಲ್ಲಿ ನೀಡಲಾದ ಜಾಗ ನುಂಗಿದ್ದು ಯಾರು? ಎಂದು ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ದಲಿತರ ಭೂಮಿ ಕಬಳಿಸಿದವರನ್ನು ಸಿದ್ದರಾಮಯ್ಯ ಜತೆಯಲ್ಲಿ ಇಟ್ಟು ಕೊಂಡಿದ್ದಾರೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದ್ವಂದ್ವ ನೀತಿ ಬಗ್ಗೆ ಕಿಡಿಕಾರಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಸಿದ್ದಾರಾಮಯ್ಯ ಅವರು ತಾವು ಅಹಿಂದ ನಾಯಕ ಎಂದು ಹೇಳಿಕೊಳ್ಳುತ್ತಾರೆ. ದುರಂತವೆಂದರೆ, ದಲಿತರ ಭೂಮಿ ಕಬಳಿಸಿದವರನ್ನೇ ತಮ್ಮ ಜತೆಯಲ್ಲಿ ಇಟ್ಟುಕೊಂಡಿದ್ದಾರೆ! ಈಗ ನೋಡಿದರೆ ಅವರು ಮುಖ್ಯಮಂತ್ರಿ ಆಗಬೇಕು ಎಂದು ಹೊರಟಿದ್ದಾರೆ. ಇದು ಈ ಸರ್ಕಾರದಲ್ಲಿ ನಡೆಯುತ್ತಿರುವ ದಲಿತ ವಿರೋಧಿ ನೀತಿ ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

11 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

11 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

12 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

12 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

12 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

12 hours ago