ಬೆಂಗಳೂರು: ಇಂದು ದೇಶದ 542 ಕೇತ್ರಗಳಿಗೆ ಇಂದು ಮತ ಎಣಿಕೆ ಆರಂಭವಾಗಿದ್ದು, ಮತದಾರ ಯಾರ ಕೈಹಿಡಿಯಲಿದ್ದಾನೆ ಎಂಬುದು ಇಂದು ಸಂಜೆ ಒಳಗೆ ತಿಳಿಯಲಿದೆ.
ಇನ್ನು ರಾಜ್ಯದ ಎಲ್ಲಾ 28 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತ ಎಣಿಕೆ ನಡೆಯುತ್ತಿದೆ. ಇನ್ನು ರಾಜ್ಯದಲ್ಲಿ ಹೈವೋಲ್ಟೇಜ್ ಕದನ ಕಣವಾಗಿರುವ ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು 78 ಸಾವಿರ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಈ ಸಂಬಂಧ ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಮಂಡ್ಯದಲ್ಲಿ ಜನರು ಈ ಬಾರಿ ನನಗೆ ಆಶೀರ್ವಾದ ಮಾಡಲಿದ್ದಾರೆ. ಎಕ್ಸಿಟ್ ಪೋಲ್ಸ್ ಶೇ.90 ರಷ್ಟು ಸತ್ಯವಾಗಲಿದ್ದು, ಈ ಬಾರಿಯೂ ಬಿಜೆಪಿ ಅಧಿಕಾರ ಉಳಿಸಿಕೋಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಎನ್‌ಡಿಎ ಕನಿಷ್ಠ 25 ಸ್ಥಾನಗಳಲ್ಲಿ ವಿಜಯ ಸಾಧಿಸಲಿದೆ ಎಂದರು.
ಇನ್ನು ಎನ್‌ಡಿಎ ಅಧಿಕಾರಕ್ಕೆ ಬಂದರೇ ಕೇಂದ್ರ ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ, ಆ ಬಗ್ಗೆ ನನಗೆ ಯಾವುದೇ ಆಸಕ್ತಿಯಿಲ್ಲ. ರಾಜ್ಯಕ್ಕೆ ಏನಾಗಬೇಕೋ ಅದನ್ನು ಮಾಡುತ್ತೇನೆ, ಕ್ಷೇತ್ರದ ಜನರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ ಎಂದು ಕುಮಾರಣ್ಣ ಹೇಳಿದರು.
ಇನ್ನು ಮಂಡ್ಯ ಕ್ಷೇತ್ರದಲ್ಲಿ ಬೆಳಿಗ್ಗೆ 10.05 ರ ಸಮಯಕ್ಕೆ ಎಚ್ ಡಿ ಕುಮಾರಸ್ವಾಮಿ 218874 ಮತ ಪಡೆದರೇ, ಸ್ಟಾರ್ ಚಂದ್ರು 129935 ಮತ ಪಡೆದಿದ್ದಾರೆ. ಸ್ಟಾರ್ ಚಂದ್ರುಗಿಂತ ಕುಮಾರಣ್ಣ 88936 ಮತಗಳ ಅಂತರದಿಂದ ಮುನ್ನಡೆ ಸಾಧಿಸುತ್ತಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…