ರಾಮನಗರ: ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ಅನುಮತಿ ನಿರಾಕರಣೆ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದ್ದು, ಅದಿರು ಗಣಿಗಾರಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೂಡ ಒಪ್ಪಿಗೆ ನೀಡಿದ್ದಾರೆ ಎಂದು ಪರಿಸರವಾದಿಗಳು ಕೂಡ ಅವರ ವಿರುದ್ಧ ಕಿಡಿಕಾರಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ವತಃ ಕೇಂದ್ರ ಸಚಿವ ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದು, ಗಣಿಗಾರಿಕೆಗೆ ಅವಕಾಶ ಕೊಟ್ಟಿದ್ದಕ್ಕೂ ನನಗೂ ಯಾವ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನನ್ನ ಮೇಲಿನ ಸಿಟ್ಟಿನಿಂದ ಈ ರೀತಿ ಮಾಡಿಕೊಂಡು ಹೋಗುತ್ತಿದ್ದಾರೆ. ಜನರ ಮಧ್ಯೆ ನಾನೇ ಮಾಡಿರುವ ರೀತಿ ಬಿಂಬಿಸಿಕೊಳ್ಳುತ್ತಿದ್ದಾರೆ. ಗಣಿಗಾರಿಕೆಗೆ ಅವಕಾಶ ಕೊಟ್ಟಿದ್ದಕ್ಕೂ ನನಗೂ ಸಂಬಂಧವಿಲ್ಲ. ಆ ಕಂಪನಿ ಚಟುವಟಿಕೆ ಮುಂದುವರಿಸಲು ನಾನು ಸಹಿ ಹಾಕಿರುವುದು. 1738 ಕೋಟಿ ರೂ. ಅವಶ್ಯಕತೆ ಇದೆ, ಆ ಹಣವನ್ನು ಕ್ರೋಡೀಕರಿಸಬೇಕಲ್ಲ. ಅದಕ್ಕೆ ಅವರು ಎರಡು ಬ್ಯಾಂಕ್ಗಳಲ್ಲಿ ಸಾಲ ತೆಗೆದುಕೊಳ್ಳುತ್ತಿದ್ದಾರೆ. ಸಾಲ ಪಡೆಯಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಪಡೆಯಬೇಕು. ಆ ಒಪ್ಪಿಗೆಗೆ ಮಾತ್ರ ನಾನು ಆ ಫೈಲ್ ಕಳುಹಿಸಿದ್ದೇನೆ ಎಂದು ಹೇಳಿದರು.
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…
ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…