ರಾಜ್ಯ

ಗಣಿಗಾರಿಕೆಗೆ ಅವಕಾಶ ಕೊಟ್ಟಿದ್ದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ: ಹೆಚ್‌ಡಿಕೆ

ರಾಮನಗರ: ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ಅನುಮತಿ ನಿರಾಕರಣೆ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದ್ದು, ಅದಿರು ಗಣಿಗಾರಿಕೆಗೆ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಕೂಡ ಒಪ್ಪಿಗೆ ನೀಡಿದ್ದಾರೆ ಎಂದು ಪರಿಸರವಾದಿಗಳು ಕೂಡ ಅವರ ವಿರುದ್ಧ ಕಿಡಿಕಾರಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ವತಃ ಕೇಂದ್ರ ಸಚಿವ ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದು, ಗಣಿಗಾರಿಕೆಗೆ ಅವಕಾಶ ಕೊಟ್ಟಿದ್ದಕ್ಕೂ ನನಗೂ ಯಾವ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನನ್ನ ಮೇಲಿನ ಸಿಟ್ಟಿನಿಂದ ಈ ರೀತಿ ಮಾಡಿಕೊಂಡು ಹೋಗುತ್ತಿದ್ದಾರೆ. ಜನರ ಮಧ್ಯೆ ನಾನೇ ಮಾಡಿರುವ ರೀತಿ ಬಿಂಬಿಸಿಕೊಳ್ಳುತ್ತಿದ್ದಾರೆ. ಗಣಿಗಾರಿಕೆಗೆ ಅವಕಾಶ ಕೊಟ್ಟಿದ್ದಕ್ಕೂ ನನಗೂ ಸಂಬಂಧವಿಲ್ಲ. ಆ ಕಂಪನಿ ಚಟುವಟಿಕೆ ಮುಂದುವರಿಸಲು ನಾನು ಸಹಿ ಹಾಕಿರುವುದು. 1738‌ ಕೋಟಿ ರೂ. ಅವಶ್ಯಕತೆ ಇದೆ, ಆ ಹಣವನ್ನು ಕ್ರೋಡೀಕರಿಸಬೇಕಲ್ಲ. ಅದಕ್ಕೆ ಅವರು ಎರಡು ಬ್ಯಾಂಕ್​ಗಳಲ್ಲಿ ಸಾಲ‌ ತೆಗೆದುಕೊಳ್ಳುತ್ತಿದ್ದಾರೆ. ಸಾಲ ಪಡೆಯಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಪಡೆಯಬೇಕು. ಆ ಒಪ್ಪಿಗೆಗೆ ಮಾತ್ರ ನಾನು ಆ ಫೈಲ್ ಕಳುಹಿಸಿದ್ದೇನೆ ಎಂದು ಹೇಳಿದರು.

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

8 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

9 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

10 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

10 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago