ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಎಚ್.ಡಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಂಡ ಬಳಿಕ ಕರ್ನಾಟಕಕ್ಕೆ ಸಂಬಂಧಿಸಿದ ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಖುಷಿ ಹಂಚಿಕೊಂಡಿರುವ ಎಚ್.ಡಿ ಕುಮಾರಸ್ವಾಮಿ ಕೇಂದ್ರದ ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಕಡತಕ್ಕೆ ಸಹಿ ಹಾಕಿದೆ. ಅದು ಕರ್ನಾಟಕಕ್ಕೆ ಸಂಬಂಧಿಸಿದ ಕಡತ ಎನ್ನುವುದು ವಿಶೇಷ ಎಂದು ಬರೆದುಕೊಂಡಿದ್ದಾರೆ.
ದೇವದಾರಿ ಕಬ್ಬಿಣದ ಅದಿರು ಗಣಿ ಕಾರ್ಯಾಚರಣೆಗಾಗಿ ಕೆಐಓಸಿಎಲ್ ಲಿಮಿಟೆಡ್‌ನ ಮೊದಲ ಕಡತಕ್ಕೆ ಅವರು ಸಹಿ ಹಾಕಿದ್ದಾರೆ. ಈ ಸಂದರ್ಭದಲ್ಲಿ ಉಕ್ಕು ಸಚಿವಾಲಯದ ಕಾರ್ಯದರ್ಶಿ ನಾಗೇಂದ್ರ ನಾಥ್ ಸಿನ್ಹಾ ಇದ್ದರು.