ರಾಜ್ಯ

ಸರ್ಕಾ‌ರಿ ಆಸ್ಪತ್ರೆಗಳಲ್ಲಿ 327 ಬಾಣಂತಿಯರ ಸರಣಿ ಸಾವು; ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಕಳವಳ

ಬೆಂಗಳೂರು: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸರಣಿ ಸಾವಿನ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು; ಈ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿಗಳಿಂದ ಸಮಗ್ರ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕಳಪೆ ಔಷಧ ಪೂರೈಕೆ ವಿಷಯ ಸರ್ಕಾರದ ಗಮನಕ್ಕೆ ಬಂದಿರಲಿಲ್ಲವೇ? ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಈ ಮಾಹಿತಿ ಇರಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇದೇನಾ ಮಹಿಳೆಯರ ಸಬಲೀಕರಣ?

ಪ್ರಗತಿಪರ ರಾಜ್ಯ ಕರ್ನಾಟಕದಲ್ಲಿ ಈ ವರ್ಷ 327 ಬಾಣಂತಿಯರು ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದ್ದಾರೆ! ಸ್ವತಃ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ ನೀಡಿರುವ ಈ ಮಾಹಿತಿ ನನಗೆ ಆಘಾತವುಂಟು ಮಾಡಿದೆ. ವೈದ್ಯ ಕ್ಷೇತ್ರದಲ್ಲಿ ಅಗಾಧ ಮುನ್ನಡೆ ಸಾಧಿಸಿರುವ ಈ ಆಧುನಿಕ ಕಾಲದಲ್ಲಿಯೂ ಮಹಿಳೆಯರು ಆಸ್ಪತ್ರೆಗಳಲ್ಲಿಯೇ ಜೀವ ಚೆಲ್ಲುತ್ತಿರುವುದು ರಾಜ್ಯಕ್ಕೆ ಗೌರವ ತರುವ ವಿಚಾರವಲ್ಲ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಮಹಿಳೆಯರಿಗೆ ಗೃಹಲಕ್ಷ್ಮಿ ಗ್ಯಾರಂಟಿ ಕೊಟ್ಟು ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಿದ್ದೇವೆ ಎನ್ನುವ ರಾಜ್ಯ ಕಾಂಗ್ರೆಸ್ ಸರಕಾರ; ಆಸ್ಪತ್ರೆಗಳಲ್ಲಿ ಅದೇ ಗೃಹಲಕ್ಷ್ಮೀಯರ ಜೀವಹರಣ ಮಾಡುತ್ತಿದೆ. ಮಗುವಿಗೆ ಜನ್ಮ ನೀಡಲು ಸರಕಾರಿ ಆಸ್ಪತ್ರೆಗೆ ವಿಶ್ವಾಸದಿಂದ ತೆರಳುವ ಗೃಹಲಕ್ಷ್ಮಿಯರು ಜೀವಸಮೇತ ಮರಳಿ ಮನೆಗೆ ಬರುವ ಗ್ಯಾರಂಟಿಯೇ ಇಲ್ಲ!! ಇದೇನಾ ಮಹಿಳೆಯರ ಸಬಲೀಕರಣ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

IV ದ್ರಾವಣ ಪೂರೈಸಿದವರು ಯಾರು?

ರಾಜ್ಯದಲ್ಲಿ ಸರಕಾರಿ ಆರೋಗ್ಯ ವ್ಯವಸ್ಥೆ ಪೂರ್ಣ ಹದಗೆಟ್ಟಿದೆ. ಆಸ್ಪತ್ರೆಗಳು ಸಾವಿನ ಕೂಪಗಳಾಗಿವೆ. ಕಳಪೆ ಗ್ಲೂಕೋಸ್, ಔಷಧಗಳಿಂದ ಗೃಹಲಕ್ಷ್ಮೀಯರು ಬಲಿಯಾಗುತ್ತಿದ್ದಾರೆ. ಬಳ್ಳಾರಿ ಆಸ್ಪತ್ರೆಯಲ್ಲಿ IV ದ್ರಾವಣ, ಅಂದರೆ; ರಿಂಗರ್ ಲ್ಯಾಕ್ಟೇಟ್ ದ್ರಾವಣ (Ringer lactate infusion) ಪಡೆದ ಎರಡೇ ಗಂಟೆಯಲ್ಲಿ 9 ಬಾಣಂತಿಯರು ಅಸ್ವಸ್ಥರಾಗಿದ್ದರೆನ್ನುವುದು ಕಳವಳಕಾರಿ. ಹಾಗಾದರೆ, ಈ ದ್ರಾವಣ ಪೂರೈಸಿದ ಕಂಪನಿ ಯಾವುದು? ಅದು ಯಾರದ್ದು? ಎಂದು ಕುಮಾರಸ್ವಾಮಿ ಅವರು ಕೇಳಿದ್ದಾರೆ.

ಅನೇಕ ದಿನಗಳಿಂದ ಕಳಪೆ ಗ್ಲೂಕೋಸ್, ಔಷಧ ಪೂರೈಕೆ ಆಗುತ್ತಿದ್ದರೂ ಸರಕಾರ ಏನು ಮಾಡುತ್ತಿತ್ತು? ಇಷ್ಟು ಸೂಕ್ಷ್ಮ ವಿಚಾರವನ್ನು ಆರೋಗ್ಯ ಸಚಿವರು ಅಲಕ್ಷ್ಯ ಮಾಡಿದ್ದೇಕೆ? ಸಚಿವರಿಗೆ ಇಲಾಖೆಯಲ್ಲಿ ಏನೇನು ನಡೆಯುತ್ತಿದೆ ಎನ್ನುವುದು ಗೊತ್ತೇ ಇರಲಿಲ್ಲವೇ? ಎಂದು ಆರೋಗ್ಯ ಸಚಿವರನ್ನು ನೇರವಾಗಿ ಪ್ರಶ್ನೆ ಮಾಡಿದ್ದಾರೆ.

ಗೃಹಲಕ್ಷ್ಮೀಯರ ಪಾಪ ಅವರನ್ನು ಸುಮ್ಮನೆ ಬಿಡುವುದಿಲ್ಲ

ನನ್ನ ತಪ್ಪಿದ್ದರೆ ರಾಜೀನಾಮೆ ಕೊಡುವೆ ಎಂಬ ಸಚಿವರ ಹೇಳಿಕೆ ಅನಪೇಕ್ಷಿತ. ಜವಾಬ್ದಾರಿ ಕೊಟ್ಟಿರುವುದು ಕೈ ತೊಳೆದುಕೊಂಡು ಪಾರಾಗಲಿಕ್ಕಲ್ಲ. ಅಗತ್ಯವಿರುವುದು ರೋಗಗ್ರಸ್ತ ಆರೋಗ್ಯ ಇಲಾಖೆಗೆ ಸೂಕ್ತ ಚಿಕಿತ್ಸೆ. ಪಲಾಯನಕ್ಕಿಂತ ಪ್ರಾಯಶ್ಚಿತ್ತ ಮುಖ್ಯ. ಇಲಾಖೆಯನ್ನು ಸರಿ ಮಾಡುವುದು ಅವರ ಹೊಣೆ. ಗೃಹಲಕ್ಷ್ಮೀಯರ ಪಾಪ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮರಣಗಳಿಂದ ಸರಕಾರ ನುಣಚಿಕೊಳ್ಳಲು ಸಾಧ್ಯವಿಲ್ಲ. ಹೈಕೋರ್ಟ್’ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು. ಹದಗೆಟ್ಟ ಆರೋಗ್ಯ ವ್ಯವಸ್ಥೆಯನ್ನು ಹಳಿಗೆ ತರುವ ಕೆಲಸ ತುರ್ತಾಗಿ ಆಗಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

andolana

Recent Posts

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

3 mins ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

32 mins ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

58 mins ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

1 hour ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

2 hours ago