ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ (ಜೂನ್.24) ಆರಂಭಗೊಂಡಿದ್ದು, ಲೋಕಸಭೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾಗಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಹಂಗಾಮಿ ಅಧ್ಯಕ್ಷರಾಗಿ ಬಿಜೆಪಿ ಸಂಸದ ಭರ್ತೃಹರಿ ಅವರಿಂದ ಪ್ರಮಾಣವಚನ ಸ್ವೀಕರಿಸಿದರು.
ಎಚ್‌ಡಿ ಕುಮಾರಸ್ವಾಮಿ ಅವರು ತಮ್ಮ ಮಾತೃಭಾಷೆಯಾದ ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ್ದು, ವಿಶೇಷವಾಗಿತ್ತು.
ಸೋಮವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭರ್ತೃಹರಿ ಅವರಿಗೆ ಪ್ರಮಾಣವಚನ ಬೋಧಿಸಿದರು. ಬಳಿಕ ಸಂಸತ್‌ನಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ವಾರಣಾಸಿ ಕ್ಷೇತ್ರದ ಸಂಸದರಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದರು.
ಅಧಿವೇಶನದ ಮೊದಲ ದಿನವಾದ ಇಂದು 280 ಮಂದಿ ಸಂಸದರು ಪ್ರಮಾಣವಚನ ಸ್ವೀಕರಿಸಿದ್ದು, ಇದರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾಗಿ ಎಚ್.ಡಿ ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಿದರು.
ಎಚ್‌ಡಿಕೆ ಅವರು ಪ್ರಮಾಣವಚನ ಸ್ವೀಕರಿಸಿದ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. “18ನೇ ಲೋಕಸಭೆಯ ಸದಸ್ಯನಾಗಿ, ಮಂಡ್ಯ ಮಹಾಜನತೆಯ ಪ್ರತಿನಿಧಿಯಾಗಿ ಗೌರವಾನ್ವಿತ ಹಂಗಾಮಿ ಸಭಾಧ್ಯಕ್ಷರಾದ ಶ್ರೀ ಭರ್ತೃಹರಿ ಮಹತಾಬ್ ಅವರ ಸಮಕ್ಷಮದಲ್ಲಿ ನನ್ನ ಮಾತೃಭಾಷೆಯಾದ ಕನ್ನಡಲ್ಲಿ ಪ್ರಮಾಣ ಸ್ವೀಕರಿಸಿದೆ. ಇದು ನನ್ನ ಬದುಕಿನ ಅವಿಸ್ಮರಣೀಯ, ಹೆಮ್ಮೆಯ ಕ್ಷಣ.
ಭಾರತದ ಪ್ರಜಾಪ್ರಭುತ್ವ ದೇಗುಲದಲ್ಲಿ ಈ ಧನ್ಯತೆಯ ಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ ಲೋಕಸಭೆ ಕ್ಷೇತ್ರದ ಎಲ್ಲಾ ತಂದೆ ತಾಯಂದಿರು, ಅಣ್ಣ ತಮ್ಮಂದಿರು, ಅಕ್ಕ ತಂಗಿಯರು ಹಾಗೂ ಸಮಸ್ತ ಕನ್ನಡಿಗರಿಗೆ ಅನಂತ ಧನ್ಯವಾದಗಳನ್ನು ಅರ್ಪಣೆ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ. ಆ ಮೂಲಕ ಮಂಡ್ಯ ಜನತೆಗೆ ಎಚ್.ಡಿ ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…