ನವದೆಹಲಿ: ನರೇಂದ್ರ ಮೋದಿ ಅವರ ಸಚಿವ ಸಂಪುಟದಲ್ಲಿ ಕರ್ನಾಟಕದಿಂದ ಸಂಪುಟ ದರ್ಜೆ ಸಚಿವರಾಗಿ ಎಚ್.ಡಿ ಕುಮಾರಸ್ವಾಮಿ ಅವರು ಇಂದು(ಜೂ.9) ಪ್ರಮಾಣ ವಚನ ಸ್ವೀಕರಿಸಿದರು.
ಸಚಿವ ಸಂಪುಟದ ಮಂತ್ರಿಯಾಗಿ ಸರತಿಯಲ್ಲಿ 9 ನೇಯವರಾಗಿ ಕುಮಾರಸ್ವಾಮಿ ಅವರು ಸಾಂಪ್ರದಾಯಿಕ ಉಡುಗೆ ಬಿಳಿ ಪಂಚೆ ಮತ್ತ ಬಿಳಿ ಶರ್ಟ್ ಧರಿಸಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಎನ್‌ಡಿಎ ಮಿತ್ರ ಪಕ್ಷಗಳಲ್ಲಿ ಮೊದಲಿಗರಾಗಿ ಇಂಗ್ಲೀಷ್‌ನಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದರು.