Mysore
16
clear sky

Social Media

ಶುಕ್ರವಾರ, 30 ಜನವರಿ 2026
Light
Dark

ಚನ್ನಪಟ್ಟಣ ಉಪ ಚುನಾವಣೆ: ಸ್ಟಾರ್‌ ಪ್ರಚಾರಕರ ಪಟ್ಟಿಯಿಂದ ಜಿಟಿಡಿ, ರೇವಣ್ಣಗೆ ಕೊಕ್‌

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಪರ ಪ್ರಚಾರ ಮಾಡಲು ಸ್ಟಾರ್‌ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆದರೆ ಈ ಪಟ್ಟಿಯಲ್ಲಿ ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಡಿ.ದೇವೇಗೌಡ ಹಾಗೂ ಶಾಸಕ ಎಚ್‌.ಡಿ.ರೇವಣ್ಣ ಅವರ ಹೆಸರನ್ನು ಕೈ ಬಿಡುವ ಮೂಲಕ ಶಾಕ್ ನೀಡಿದೆ.

ರಾಜ್ಯದಲ್ಲಿ ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ನವೆಂಬರ್‌ 13ರಂದು ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳು ಮೂರು ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.

ಜೆಡಿಎಸ್‌ ಚನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರ ಮಾಡಲು 40 ನಾಯಕರನ್ನು ಒಳಗೊಂಡ ಸ್ಟಾರ್‌ ಪ್ರಚಾರಕರ ಪಟ್ಟಿಯನ್ನು ಅನಾವರಣಗೊಳಿಸಿದೆ. ಆ ಪಟ್ಟಿಯಲ್ಲಿ ಶಾಸಕರು, ಸಂಸದರು, ಹಾಲಿ ಮತ್ತು ಮಾಜಿ ಸಚಿವರು, ಎಂಎಲ್‌ಸಿ ಸೇರಿದಂತೆ ಹಲವು ಪ್ರಮುಖ ನಾಕಯರ ಹೆಸರು ಇದೆ. ಆದರೆ ಜಿ.ಟಿ.ದೇವೇಗೌಡರನ್ನು ಹಾಗೂ ಎಚ್‌.ಡಿ.ರೇವಣ್ಣ ಅವರನ್ನು ಕೈಬಿಡಲಾಗಿದೆ.

Tags:
error: Content is protected !!