ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಲು ಸ್ಟಾರ್ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆದರೆ ಈ ಪಟ್ಟಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಡಿ.ದೇವೇಗೌಡ ಹಾಗೂ ಶಾಸಕ ಎಚ್.ಡಿ.ರೇವಣ್ಣ ಅವರ ಹೆಸರನ್ನು ಕೈ ಬಿಡುವ ಮೂಲಕ ಶಾಕ್ ನೀಡಿದೆ.
ರಾಜ್ಯದಲ್ಲಿ ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ನವೆಂಬರ್ 13ರಂದು ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಮೂರು ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.
ಜೆಡಿಎಸ್ ಚನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರ ಮಾಡಲು 40 ನಾಯಕರನ್ನು ಒಳಗೊಂಡ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಅನಾವರಣಗೊಳಿಸಿದೆ. ಆ ಪಟ್ಟಿಯಲ್ಲಿ ಶಾಸಕರು, ಸಂಸದರು, ಹಾಲಿ ಮತ್ತು ಮಾಜಿ ಸಚಿವರು, ಎಂಎಲ್‌ಸಿ ಸೇರಿದಂತೆ ಹಲವು ಪ್ರಮುಖ ನಾಕಯರ ಹೆಸರು ಇದೆ. ಆದರೆ ಜಿ.ಟಿ.ದೇವೇಗೌಡರನ್ನು ಹಾಗೂ ಎಚ್.ಡಿ.ರೇವಣ್ಣ ಅವರನ್ನು ಕೈಬಿಡಲಾಗಿದೆ.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…