ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣದ ಸಂತ್ರಸ್ಥೆ ಮಹಿಳೆಯನ್ನು ಕಿಡ್ನಾಪ್ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ದೂರನ್ನು ರದ್ದು ಮಾಡುವಂತೆ ಶಾಸಕ ಎಚ್‌ಡಿ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಫೆ.7ಕ್ಕೆ ಮುಂದೂಡಿದೆ.
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ದೋಷಾರೋಪ ನಿಗದಿಪಡಿಸದಂತೆ ನೀಡಿದ ಮಧ್ಯಂತರ ಆದೇಶವನ್ನು ಮತ್ತೆ ವಿಸ್ತರಣೆ ಮಾಡಿ ವಿಚಾರಣೆಯನ್ನು ಫೆ.7ಕ್ಕೆ ಮುಂದೂಡಿದೆ. ಇದರಿಂದ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮಾಡಿದ ಸಂತ್ರಸ್ತೆ ಮಹಿಳೆಯನ್ನು ಸಾಕ್ಷ್ಯನಾಶ ಮಾಡುವ ಉದ್ದೇಶದಿಂದ ಎಚ್‌ಡಿ ರೇವಣ್ಣ ಅವರು ಕಿಡ್ನಾಪ್ ಮಾಡಿಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್ನು ಕಿಡ್ನಾಪ್ ಪ್ರಕರಣದಲ್ಲಿ ಸದ್ಯ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದೆ.