ಬೆಂಗಳೂರು: ಅಮಿತ್ ಶಾ ಭಾಗವಹಿಸಿದ್ದ ಕಾರ್ಯಕ್ರಮದಿಂದ ಹೆಚ್‌ಡಿಕೆ ಭಾಗಿಯಾಗ ಬೇಕಿತ್ತು ಆದರೆ ಅವರು ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಸದ್ದು ಮಾಡಿತ್ತು. ಈ ಸಂದರ್ಭದಲ್ಲಿ ವಿಚಾರದ ಕುರಿತಂತೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಕೇಂದ್ರ ಗೃಹ ಸಚಿವ, ಬಿಜೆಪಿ ಚುನಾವಣಾ ಚಾಣಾಕ್ಯ ಅಮಿತ್ ಶಾ ಮೈಸೂರಿಗೆ ಆಗಮಿಸಿದ್ದು, ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅಮಿತ್ ಶಾ ಒಂದೇ ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಕೊನೇ ಕ್ಷಣದಲ್ಲಿ ಅಮಿತ್ ಶಾ ಹಾಗೂ ಕುಮಾರಸ್ವಾಮಿ ಭೇಟಿ ರದ್ದಾಗಿದೆ. ಅಮಿತ್ ಶಾ ಕಾರ್ಯಕ್ರಮದಿಂದ ಹೆಚ್.ಡಿ.ಕೆ ದೂರ ಉಳಿದಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಹೆಚ್.ಡಿ.ಕುಮಾರಸ್ವಾಮಿ, ಅಮಿತ್ ಶಾ ಅವರನ್ನು ಭೇಟಿಯಾಗುತ್ತಿಲ್ಲ.
ಕುಮಾರಸ್ವಾಮಿಯವರಿಗೆ ಸ್ವಲ್ಪ ಆರೋಗ್ಯದ ಸಮಸ್ಯೆ ಇದೆ. ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಹಾಗಾಗಿ ಭೇಟಿಯಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಕುಮಾರಸ್ವಾಮಿ ಅಮಿತ್ ಶಾ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಅನಾರೋಗ್ಯ ಕಾರಣಕ್ಕೆ ಭೇಟಿ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾಗಿ ಹೇಳಿದ್ದಾರೆ.
ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…
ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್…
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…
ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…