ರಾಜ್ಯ

ಅಮಿತ್‌ ಶಾ ಇದ್ದ ಕಾರ್ಯಕ್ರಮಕ್ಕೆ ಹೆಚ್‌ಡಿಕೆ ಗೈರು : ಸ್ಪಷ್ಟನೆ ನೀಡಿದ ನಿಖಿಲ್‌ ಕುಮಾರಸ್ವಾಮಿ !

ಬೆಂಗಳೂರು: ಅಮಿತ್‌ ಶಾ ಭಾಗವಹಿಸಿದ್ದ ಕಾರ್ಯಕ್ರಮದಿಂದ ಹೆಚ್‌ಡಿಕೆ  ಭಾಗಿಯಾಗ ಬೇಕಿತ್ತು ಆದರೆ ಅವರು ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಸದ್ದು ಮಾಡಿತ್ತು. ಈ ಸಂದರ್ಭದಲ್ಲಿ ವಿಚಾರದ ಕುರಿತಂತೆ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಕೇಂದ್ರ ಗೃಹ ಸಚಿವ, ಬಿಜೆಪಿ ಚುನಾವಣಾ ಚಾಣಾಕ್ಯ ಅಮಿತ್ ಶಾ ಮೈಸೂರಿಗೆ ಆಗಮಿಸಿದ್ದು, ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅಮಿತ್ ಶಾ ಒಂದೇ ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಕೊನೇ ಕ್ಷಣದಲ್ಲಿ ಅಮಿತ್ ಶಾ ಹಾಗೂ ಕುಮಾರಸ್ವಾಮಿ ಭೇಟಿ ರದ್ದಾಗಿದೆ. ಅಮಿತ್ ಶಾ ಕಾರ್ಯಕ್ರಮದಿಂದ ಹೆಚ್.ಡಿ.ಕೆ ದೂರ ಉಳಿದಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಹೆಚ್.ಡಿ.ಕುಮಾರಸ್ವಾಮಿ, ಅಮಿತ್ ಶಾ ಅವರನ್ನು ಭೇಟಿಯಾಗುತ್ತಿಲ್ಲ.

ಕುಮಾರಸ್ವಾಮಿಯವರಿಗೆ ಸ್ವಲ್ಪ ಆರೋಗ್ಯದ ಸಮಸ್ಯೆ ಇದೆ. ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಹಾಗಾಗಿ ಭೇಟಿಯಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಕುಮಾರಸ್ವಾಮಿ ಅಮಿತ್ ಶಾ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಅನಾರೋಗ್ಯ ಕಾರಣಕ್ಕೆ ಭೇಟಿ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾಗಿ ಹೇಳಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago