Mysore
21
scattered clouds

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ಸಚಿವ ನಿತಿನ್‌ ಗಡ್ಕರಿರವರೊಂದಿಗೆ ಮಂಡ್ಯ ಜಿಲ್ಲೆಯ ರಸ್ತೆ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ: ಎಚ್‌ಡಿಕೆ

ನವದೆಹಲಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಇಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ಮಂಡ್ಯ ಜಿಲ್ಲೆಯ ರಸ್ತೆ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮಂಡ್ಯದ ವರ್ತುಲ ರಸ್ತೆ ಯೋಜನೆ (ಬಾಕಿ ಉಳಿದಿರುವ ಕಾಮಗಾರಿ) ಸೇರಿ ರಾಜ್ಯದ ಕೆಲ ಮಹತ್ವಪೂರ್ಣ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.

ಸಾರಿಗೆ ಸಚಿವರು ಈ ಬಗ್ಗೆ ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಎಲ್ಲಾ ಯೋಜನೆಗಳ ಬಗ್ಗೆ ಖುದ್ದು ಗಮನ ಹರಿಸುವುದಾಗಿ ಭರವಸೆ ನೀಡಿದರು. ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಅಗಲೀಕರಣ -ವೈಟ್ ಟ್ಯಾಪಿಂಗ್ ಹಾಗೂ NH-275ರಲ್ಲಿರುವ ನಗರದ ಎಲ್ಲಾ ಜಂಕ್ಷನ್, ಪಾದಚಾರಿ ಮಾರ್ಗ ಅಭಿವೃದ್ಧಿ ಬಗ್ಗೆಯೂ ಸಾರಿಗೆ ಸಚಿವರ ಗಮನ ಸೆಳೆಯಲಾಯಿತು ಎಂದಿದ್ದಾರೆ.

ಇನ್ನೂ ಜೇವರ್ಗಿ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ (NH-150A)ಯಲ್ಲಿನ ಪಾಂಡವಪುರ ಪಟ್ಟಣ, ಕಿರಂಗೂರು ಬಳಿಯ ಹೆದ್ದಾರಿ ಅಭಿವೃದ್ಧಿ. ಆಂಧ್ರ ಪ್ರದೇಶದ ಕುಪ್ಪಂ- ಬಂಗಾರಪೇಟೆ- ಕೋಲಾರ -ಚಿಂತಾಮಣಿ ನಡುವಿನ ರಾಷ್ಟ್ರೀಯ ಹೆದ್ದಾರಿ (NH-42). ಚಿಂತಾಮಣಿಯ ಗಜಾನನ ಸರ್ಕಲ್- ಚೇಳೂರು ನಡುವಿನ ಹೆದ್ದಾರಿ (NH-69) ಹಾಗೂ ರಾಷ್ಟ್ರೀಯ ಹೆದ್ದಾರಿ NH-75ರಿಂದ ಹೊಸಕೋಟೆ -ಹೆಚ್.ಕ್ರಾಸ್- ಚಿಂತಾಮಣಿ ನಡುವೆ ಸಂಪರ್ಕ ಕಲ್ಪಿಸುವ NH-69. NH-42ರಿಂದ ಹೊಸಕೋಟೆ -ಗೌನಿಪಲ್ಲಿ – ಶ್ರೀನಿವಾಸಪುರ ಮೂಲಕ NH-75ಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಯ ಸೇರಿದಂತೆ ಈ ಎಲ್ಲಾ ಯೋಜನೆಗಳ ಬಗ್ಗೆ ಸಾರಿಗೆ ಸಚಿವರ ಜತೆ ಸಮಾಲೋಚನೆ ನಡೆಸಲಾಯಿತು ಎಂದು ಹೇಳಿದ್ದಾರೆ.

Tags:
error: Content is protected !!