ನವದೆಹಲಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮಂಡ್ಯ ಜಿಲ್ಲೆಯ ರಸ್ತೆ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮಂಡ್ಯದ ವರ್ತುಲ ರಸ್ತೆ ಯೋಜನೆ (ಬಾಕಿ ಉಳಿದಿರುವ ಕಾಮಗಾರಿ) ಸೇರಿ ರಾಜ್ಯದ ಕೆಲ ಮಹತ್ವಪೂರ್ಣ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.
ಸಾರಿಗೆ ಸಚಿವರು ಈ ಬಗ್ಗೆ ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಎಲ್ಲಾ ಯೋಜನೆಗಳ ಬಗ್ಗೆ ಖುದ್ದು ಗಮನ ಹರಿಸುವುದಾಗಿ ಭರವಸೆ ನೀಡಿದರು. ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಅಗಲೀಕರಣ -ವೈಟ್ ಟ್ಯಾಪಿಂಗ್ ಹಾಗೂ NH-275ರಲ್ಲಿರುವ ನಗರದ ಎಲ್ಲಾ ಜಂಕ್ಷನ್, ಪಾದಚಾರಿ ಮಾರ್ಗ ಅಭಿವೃದ್ಧಿ ಬಗ್ಗೆಯೂ ಸಾರಿಗೆ ಸಚಿವರ ಗಮನ ಸೆಳೆಯಲಾಯಿತು ಎಂದಿದ್ದಾರೆ.
ಇನ್ನೂ ಜೇವರ್ಗಿ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ (NH-150A)ಯಲ್ಲಿನ ಪಾಂಡವಪುರ ಪಟ್ಟಣ, ಕಿರಂಗೂರು ಬಳಿಯ ಹೆದ್ದಾರಿ ಅಭಿವೃದ್ಧಿ. ಆಂಧ್ರ ಪ್ರದೇಶದ ಕುಪ್ಪಂ- ಬಂಗಾರಪೇಟೆ- ಕೋಲಾರ -ಚಿಂತಾಮಣಿ ನಡುವಿನ ರಾಷ್ಟ್ರೀಯ ಹೆದ್ದಾರಿ (NH-42). ಚಿಂತಾಮಣಿಯ ಗಜಾನನ ಸರ್ಕಲ್- ಚೇಳೂರು ನಡುವಿನ ಹೆದ್ದಾರಿ (NH-69) ಹಾಗೂ ರಾಷ್ಟ್ರೀಯ ಹೆದ್ದಾರಿ NH-75ರಿಂದ ಹೊಸಕೋಟೆ -ಹೆಚ್.ಕ್ರಾಸ್- ಚಿಂತಾಮಣಿ ನಡುವೆ ಸಂಪರ್ಕ ಕಲ್ಪಿಸುವ NH-69. NH-42ರಿಂದ ಹೊಸಕೋಟೆ -ಗೌನಿಪಲ್ಲಿ – ಶ್ರೀನಿವಾಸಪುರ ಮೂಲಕ NH-75ಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಯ ಸೇರಿದಂತೆ ಈ ಎಲ್ಲಾ ಯೋಜನೆಗಳ ಬಗ್ಗೆ ಸಾರಿಗೆ ಸಚಿವರ ಜತೆ ಸಮಾಲೋಚನೆ ನಡೆಸಲಾಯಿತು ಎಂದು ಹೇಳಿದ್ದಾರೆ.
ನಾಗ್ಪುರ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…
ಮಂಡ್ಯ: ಯುವಜನರು ಮಾದಕ ವ್ಯಸನದಿಂದ ದೂರವಿದ್ದರೆ ಆರೋಗ್ಯವಂತ ಸಮಾಜ ನಿರ್ಮಿಸಬಹುದು. ಯುವಜನತೆಯು ಮಾದಕ ವಸ್ತುಗಳಿಗೆ ಬಲಿಯಾಗದೆ ಅದರಿಂದ ದೂರವಿರಬೇಕು ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಶಿರಗೋಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ರಥೋತ್ಸವ ಭಾನುವಾರ ಬೆಳಿಗ್ಗೆ…
ಟೆಹರಾನ್: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಪರಿಣಾಮ ಇದೀಗ ಇರಾನ್ ಕೂಡ ಪ್ರತೀಕಾರವಾಗಿ ಇಸ್ರೇಲ್ ಅಮೆರಿಕಾ…
ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್ ಎಂಬುವವರ ಪುತ್ರಿ ಪೂಜಾ…
ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ…