ರಾಜ್ಯ

ಎಚ್‌ಡಿಕೆ ಬೆಂಬಲ ನೀಡುವಾಗಲೇ ನೀಡಲಿಲ್ಲ, ಈಗೇನು ಬೆಂಬಲ ನೀಡುತ್ತಾರೆ: ಡಿಕೆಶಿ ತಿರುಗೇಟು

ಬೆಂಗಳೂರು : ಮಾಜಿ ಸಿ.ಎಂ ಕುಮಾರಸ್ವಾಮಿ ಅವರು ಎನ್ ಡಿಎ ಮೈತ್ರಿಕೂಟದವವರು. ನಮಗೂ ಎನ್ ಡಿಎಗೂ ಸಂಬಂಧವಿಲ್ಲ. ಮೊದಲು ಎನ್ ಡಿಎಯಿಂದ ಆಚೆ ಬಂದು ನಂತರ ಬೆಂಬಲದ ಬಗ್ಗೆ ಮಾತನಾಡಲಿ. ಅವರು ಬೆಂಬಲ ನೀಡುವ ಕಾಲದಲ್ಲೇ ಬೆಂಬಲ ನೀಡಲಿಲ್ಲ. ಈಗೇನು ಬೆಂಬಲ ನೀಡುತ್ತಾರೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.

‘ಶಿವಕುಮಾರ್ ಅವರು ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ 19 ಶಾಸಕರ ಬೆಂಬಲ ನೀಡುತ್ತೇವೆ’ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಈ ರೀತಿ ಉತ್ತರಿಸಿದರು.

ಕುಮಾರಸ್ವಾಮಿ ಅವರ ಮಾತು ಕೇಳಿ ಬಹಳ ಸಂತೋಷವಾಗಿದೆ. ಸದ್ಯ ನಮಗೆ ರಾಜ್ಯದ ಜನತೆ 136 ಸೀಟು ಜತೆ ಅಧಿಕಾರ ಕೊಟ್ಟಿದ್ದಾರೆ. ಅವರು ಉತ್ತಮ ವಿರೋಧ ಪಕ್ಷದ ನಾಯಕನಾಗಿ ಸರ್ಕಾರವನ್ನು ತಿದ್ದುವ ಕೆಲಸ ಮಾಡಲಿ. ಟೀಕೆ ಮಾಡುವುದನ್ನು ಬಿಟ್ಟು, ಸರ್ಕಾರವನ್ನು ತಿದ್ದಲಿ. ಕಾಂಗ್ರೆಸ್ ಹಾಗೂ ಬಿಜೆಪಿ ತಲಾ ಒಂದೊಂದು ಬಾರಿ ಅವರನ್ನು ಮುಖ್ಯಮಂತ್ರಿ ಮಾಡಿದೆ. ಅವರ ತಂದೆಯವರನ್ನು ಕಾಂಗ್ರೆಸ್ ಪ್ರಧಾನಮಂತ್ರಿ ಮಾಡಿದೆ. ಅವರಿಗಿರುವ ಅಪಾರ ಅನುಭವದ ಮೂಲಕ ನಮಗೆ ಮಾರ್ಗದರ್ಶನ ನೀಡಲಿ. ಈಗ ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಅವರ ಪ್ರೀತಿ ವಿಶ್ವಾಸಕ್ಕೆ ನಮಸ್ಕಾರ ಎಂದು ತಿಳಿಸಿದರು.

andolanait

Recent Posts

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

19 mins ago

ಅಹಿಂದ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ : ಕುಮಾರಸ್ವಾಮಿ ಆರೋಪ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…

36 mins ago

ಕೊಡಗು | ಟೆಕ್ಕಿ ಶರಣ್ಯ ಕೊನೆಗೂ ಪತ್ತೆ

ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊ‌ನೆಗೂ ಪತ್ತೆ…

49 mins ago

ತಮಿಳುನಾಡು ಚುನಾವಣೆ : ಅಫಿಡವಿಟ್‌ನಲ್ಲಿ 2 ಕ್ರಿಮಿನಲ್‌ ಪ್ರಕರಣ ಘೋಷಿಸಿಕೊಂಡ ವಿಜಯ್‌

ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ…

1 hour ago

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

3 hours ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

5 hours ago