ರಾಜ್ಯ

ಅಮಿತ್‌ ಶಾ ಜೊತೆಗೆ ಎಚ್‌.ಡಿ ಕುಮಾರಸ್ವಾಮಿ ಬ್ರೇಕ್‌ ಫಾಸ್ಟ್‌ ಮೀಟಿಂಗ್‌

ಬೆಂಗಳೂರು: ಏಪ್ರಿಲ್‌ 2 ಕ್ಕೆ ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಸಚಿವ ಅಮಿತ್‌ ಶಾ ಅವರೊಂದಿಗೆ ಎಚ್.ಡಿ ಕುಮಾರಸ್ವಾಮಿ ಅವರು ಮಾತುಕತೆ ನಡೆಸಲಿದ್ದಾರೆ. ನಾಳೆ ಬೆಳಿಗ್ಗೆ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಈ ಭೇಟಿ ನಡೆಯಲಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ, ಮಂಗಳವಾರ ಬೆಳಗ್ಗೆ ಅಮಿತ್ ಶಾ ಅವರ ಜತೆ ಬ್ರೇಕ್ ಫಾಸ್ಟ್ ಮೀಟಿಂಗ್ ಇದೆ. ಲೋಕಸಭೆ ಚುನಾವಣೆ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಲಾಗುವುದು. ನಮ್ಮಲ್ಲಿರುವ ಮಾಹಿತಿಯನ್ನು ಅಮಿತ್ ಶಾ ಅವರೊಂದಿಗೆ ಹಂಚಿಕೊಳ್ಳುತ್ತೇವೆ ಎಂದರು.

ಒಟ್ಟಾರೆಯಾಗಿ ರಾಜ್ಯದ 28 ಕ್ಷೇತ್ರಗಳನ್ನು ನಮ್ಮ ಮೈತ್ರಿಕೂಟ ಗೆಲ್ಲಬೇಕು. ಅದಕ್ಕೆ ಪೂರಕವಾಗಿ ಎಲ್ಲ ರೀತಿಯಲ್ಲಿ ಚರ್ಚೆ ಮಾಡ್ತೇವೆ. ನಂತರ ಸಂಜೆ ಚನ್ನಪಟ್ಟಣದಲ್ಲಿ ರೋಡ್ ಶೋದಲ್ಲಿ ಇಬ್ಬರೂ ಭಾಗವಹಿಸುತ್ತೇವೆ. ಇಡಿ ರಾಜ್ಯಕ್ಕೆ ಚನ್ನಪಟ್ಟಣದಿಂದಲೇ ಒಂದು ಸ್ಪಷ್ಟ ಸಂದೇಶ ಕೊಡುತ್ತೇವೆ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಾಜ್ಯ ಸರ್ಕಾರಕ್ಕೆ ಮಾಧ್ಯಮಗಳನ್ನು ಕಂಡರೆ ನಡುಕವೇಕೆ?: ಜೆಡಿಎಸ್‌ ಲೇವಡಿ

ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್‌ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…

4 mins ago

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಪತ್ರ ವೈರಲ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…

19 mins ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ಸಂಪನ್ನ: ಎ.ಈ.ರಘು ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…

2 hours ago

ಮಹದೇಶ್ವರ ಬೆಟ್ಟ| ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ…

2 hours ago

ತಮಿಳುನಾಡಿನಲ್ಲಿ ಕನ್ನಡ ಧ್ವಜ ಹಾಕದಂತೆ ಎಚ್ಚರಿಕೆ: ಶಬರಿಮಲೆಗೆ ಹೊರಟಿದ್ದ ವಾಹನ ತಡೆದು ದಬ್ಬಾಳಿಕೆ

ಚೆನ್ನೈ: ನೆರೆಯ ರಾಜ್ಯ ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕಿದ್ದ ವಾಹನಗಳನ್ನು ತಡೆದು ತಮಿಳು ಪುಂಡರು ಕನ್ನಡಿಗರ ಮೇಲೆ ದರ್ಪ ಮೆರೆದಿರುವ…

2 hours ago

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತೆ: ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಅಲ್ಲ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್‌…

2 hours ago