ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಆರೋಪಿ ದರ್ಶನಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡುತ್ತಿರುವುದಕ್ಕೆ ಸರ್ಕಾರವೇ ನೇರ ಹೊಣೆ ಆಗಬೇಕು ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ದರ್ಶನ್ ಫೋಟೋ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಮಗನನ್ನು ಕಳೆದುಕೊಂಡು ರೇಣುಕಾಸ್ವಾಮಿ ಕುಟುಂಬಸ್ಥರು ನೋವಿನಲ್ಲಿದ್ದಾರೆ. ಇತ್ತ ನಮ್ಮದು ಪಾರದರ್ಶಕ ಹಾಗೂ ಹೈಟೆಕ್ ಸರ್ಕಾರ ನಮ್ಮದು ಎಂದು ದಿನಕ್ಕೊಂದು ಕತೆ ಹೇಳುತ್ತಾ ಗೃಹಮಂತ್ರಿ ಡಾ. ಜಿ.ಪರಮೇಶ್ವರ್ ಇದ್ದಾರೆ. ಪರಪ್ಪನ ಅಗ್ರಹಾರದಲ್ಲಿ ನೀಡುತ್ತಿರುವುದೇ ಹೇಟೆಕ್ ಹಾಗಿದೆಯಾ, ಇದಕ್ಕೆಲ್ಲಾ ಸರ್ಕಾರವೇ ಹೊಣೆಯಾಗಬೇಕು ಎಂದು ಅವರು ಕಟುವಾಗಿ ಟೀಕಿಸಿದರು.
ಪರಪ್ಪನ ಅಗ್ರಹಾರದಲ್ಲಿ ಖೈದಿಗಳಿಗೆ ಪಂಚತಾರಾ ಸೌಲಭ್ಯವಿದೆ. ಜೈಲಿನಲ್ಲಿ ಈ ವ್ಯವಸ್ಥೆ ಈ ಹಿಂದಿನಿಂದಲೂ ಇದೆ. ಅದು ದರ್ಶನ್ ಅವರ ಮೂಲಕ ಹೊರಗೆ ಬಂದಿದೆ. ಸರ್ಕಾರ, ಅಧಿಕಾರಿಗಳಿಂದ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಇಲ್ಲದಂತಾಗಿದೆ. ಸರ್ಕಾರದ ಮಂತ್ರಿಗಳಿಗೆ ಸಿಎಂ ಹಗರಣಗಳ ಬಗ್ಗೆ ಮಾತನಾಡಲು ಸಮಯವಿಲ್ಲ. ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. ನ್ಯಾಯಾಲಯದಿಂದ ಮಾತ್ರ ನಮಗೆ ನ್ಯಾಯ ಸಿಗಬೇಕು ಎಂದು ಅವರು ಆಗ್ರಹಿಸಿದರು.
ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ…
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ…
ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…