ರಾಜ್ಯ

ಉದ್ಯಮಿಗಳ ಪರ ನಿಂತ ಎಚ್‌ಡಿಕೆ : ಬೆಂಗಳೂರು ಬಿಟ್ಟು ಹೋಗದಂತೆ ಮನವಿ

ಹೊಸದಿಲ್ಲಿ : ಬೆಂಗಳೂರಿನ ರಸ್ತೆಗಳ ದುಸ್ಥಿತಿಯ ಬಗ್ಗೆ ದನಿ ಎತ್ತಿರುವ ಉದ್ಯಮಿಗಳ ಪರ ನಿಂತಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ರಾಜ್ಯವನ್ನು ಬಿಟ್ಟು ಹೋಗುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು; “ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರಕಾರಕ್ಕೆ ಪಾಠ ಕಲಿಸುತ್ತೇವೆ. ನಿಮ್ಮ ಜತೆ ನಾವು, ಇಡೀ ಕರ್ನಾಟಕದ ಜನತೆ ಇದ್ದೇವೆ. ಹೋಗುತ್ತೇವೆ ಎನ್ನುವ ಮಾತನ್ನು ಮನಸ್ಸಿನಿಂದ ತೆಗೆದುಬಿಡಿ. ನಾವೆಲ್ಲರೂ ಸೇರಿ ಬೆಂಗಳೂರು ನಗರವನ್ನು ಬದಲಿಸೋಣ.We will Make Bengaluru Great Again ಎಂದು ಕಂಪನಿಗಳಿಗೆ ಕುಮಾರಸ್ವಾಮಿ ಅವರು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು ಮತ್ತು ಕರ್ನಾಟಕ ಭ್ರಷ್ಟರ ಕೈಯ್ಯಲ್ಲಿ ಸಿಲುಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಎಂದು ಕೇಂದ್ರ ಸಚಿವರಾದ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಂಪನಿಗಳು ರಾಜ್ಯ ಸರಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆ ರಾಜ್ಯಗಳತ್ತ ವಲಸೆ ಹೋಗುವುದು ಬೇಡ. ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರಕಾರಕ್ಕೆ ಪಾಠ ಕಲಿಸುತ್ತೇವೆ ಎಂದು ಸಚಿವರು ಹೇಳಿದ್ದಾರೆ.

ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಕಂಡೆಲ್ಲೆಲ್ಲ ಕಸದ ರಾಶಿ. ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ? ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಸಚಿವರು ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ.ಉದ್ಯಮಿಗಳು ಸರಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ ತೋರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸರಕಾರಕ್ಕೆ ಎಳ್ಳಷ್ಟೂ ಸಂಕೋಚ, ಆತ್ಮಾಭಿಮಾನವಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಗುಂಡಿಪಾಲು ಮಾಡಿದೆ. ಇದಕ್ಕೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು ಎಂದು ಲೇವಡಿ ಮಾಡಿದರು.

ತೆರಿಗೆ ಹಾಕುವುದರಲ್ಲಿ ಸರಕಾರದ್ದು ರಾಕೆಟ್ ವೇಗ. ಗುಂಡಿ ಮುಚ್ಚುವುದರಲ್ಲಿ ಕೊನೇಪಕ್ಷ ಆಮೆ ವೇಗವೂ ಇಲ್ಲ. ಕೊಳ್ಳೆ ಹೊಡೆಯುವುದರಲ್ಲಿ ಇರುವ ಉನ್ಮಾದ, ಅಭಿವೃದ್ಧಿಯತ್ತ ವಿಪರೀತ ಉಪೇಕ್ಷೆ. ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ! ಎಂದು ಅವರು ಕಿಡಿ ಕಾರಿದ್ದಾರೆ

ತೆರಿಗೆ ಹಣ ಏನಾಗುತ್ತಿದೆ?:
ಗುಂಡಿ ಮುಚ್ಚುವುದಕ್ಕೆ ಬಿಡಿಗಾಸಿಲ್ಲದ ಸರಕಾರ ಜನರಿಂದ ಕಿತ್ತುಕೊಳ್ಳುತ್ತಿರುವ ತೆರಿಗೆ ಹಣ ಏನು ಮಾಡುತ್ತಿದೆ? ಅದು ಯಾರ ಕಿಸೆ ಸೇರುತ್ತಿದೆ? ಇದಕ್ಕೆ ಉತ್ತರ ಬೇಕೆಂದು ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ.

ಕಂಪನಿಗಳು ರಾಜ್ಯ ಸರಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆ ರಾಜ್ಯಗಳತ್ತ ವಲಸೆ ಹೋಗುತ್ತಿವೆ. ಆ ರಾಜ್ಯಗಳು ಇಂಥ ಸಮಯಕ್ಕೇ ಕಾಯುತ್ತಾ ರಿಯಾಯ್ತಿ ಮೇಲೆ ರಿಯಾಯ್ತಿಗಳನ್ನು ನೀಡುತ್ತಿವೆ. ಭಂಡ ಸರಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

5 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

5 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

7 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

7 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

8 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

8 hours ago