Mysore
21
overcast clouds

Social Media

ಗುರುವಾರ, 17 ಜುಲೈ 2025
Light
Dark

ಮೋದಿಗೆ ಧನ್ಯವಾದ ಸಲ್ಲಿಸಿದ ʼಎಚ್‌ಡಿಕೆʼ

ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಹದ್ಯೋಗಿಗಳಿಗೆ ಇಂದು(ಜೂ.10) ಖಾತೆ ಹಂಚಿಕೆ ಮಾಡಲಾಗಿದೆ.

ಅದರಂತೆ ಕರ್ನಾಟಕದ ಜೆಡಿಎಸ್‌ ಸಂಸದ ಎಚ್.ಡಿ ಕುಮಾರಸ್ವಾಮಿ ಅವರಿಗೆ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆಯನ್ನು ನೀಡಲಾಗಿದೆ.

ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಎಚ್.ಡಿ ಕುಮಾರಸ್ವಾಮಿ ಅವರು, ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರಕಾರದ ಸಂಪುಟದಲ್ಲಿ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ನನಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ್ದು, ಅವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

Tags:
error: Content is protected !!