ಬೆಂಗಳೂರು: ಭೂಮಿ ಅಕ್ರಮ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವವ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮಧ್ಯೆ ಜಟಾಪಟಿ ನಡೆಯುತ್ತಿದ್ದು, ಇದೀಗ ಎಚ್‌ಡಿಕೆಗೆ ಡಿಕೆಶಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.5) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗಳಿಗೆ ನಾನು ಹೆದರಲ್ಲ. ಅವರ ಹೆಸರನಲ್ಲಿ ಯಾವ್ಯಾವ ಕಡೆ ಎಷ್ಟು ಭೂಮಿ ಇದೆಯೆಂದು ಬಹಿರಂಗ ಪಡಿಸಲಿ. ನಾನು ಸಹ ನನ್ನ ಹೆಸರಿನಲ್ಲಿ ಹಾಗೂ ನನ್ನ ಮಕ್ಕಳ ಹೆಸರಿನಲ್ಲಿ ಎಲ್ಲೆಲ್ಲಿ ಎಷ್ಟೇಷ್ಟು ಭೂಮಿ ಇದೆ ಎಂದು ಬಹಿರಂಗಪಡಿಸುತ್ತೇನೆ. ಒಂದು ವೇಳೆ ನಾನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದೇ ಆದರೆ ಯಾವುದೇ ಶಿಕ್ಷೆಗೂ ಸಿದ್ಧನಾಗಿರುವೆ ಎಂದು ಹೇಳಿದ್ದಾರೆ.
ಏನಿದು ಜಟಾಪಟಿ?
ಎಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಸುದ್ದಿಗೋಷ್ಠಿ ನಡೆಸಿ, ಮಾಜಿ ಪ್ರಧಾನಿಯವರ ಮಗ ನಾನು. ಕೇತಗಾನಹಳ್ಳಿಯಲ್ಲಿ 4 ಎಕರೆ ಭೂಮಿ ಒತ್ತುವರಿ ಮಾಡಿಕೊಳ್ಳಬೇಕಾ? ಅತಿಕ್ರಮಣದ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದರು. ಅಲ್ಲದೇ ಡಿಸಿಎಂ ಎನ್ನುವ ವ್ಯಕ್ತಿ ಹಗರಣಗಳ ಮಹಾನಾಯಕ ಮತ್ತು ಏಳು ಕಂಪೆನಿ ಹೆಸರನಲ್ಲಿ ವ್ಯವಹಾರ ನಡೆಸಿದ್ದಾರೆ. ಈ ಬಗ್ಗೆ ನನ್ನ ಬಳಿ ದಾಖಲೆಗಳಿದ್ದು, ಆದಷ್ಟು ಬೇಗ ಬಿಡುಗಡೆ ಮಾಡುತ್ತೇನೆ ಎಂದಿದ್ದರು.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…