hdk
ಬೆಂಗಳೂರು: ವಿಧಾನಸೌಧದ ಬಳಿ ಕಾಲ್ತುಳಿತ ಆಗಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ವಿಧಾನಸೌಧ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಖಡಕ್ ಟಾಂಗ್ ಕೊಟ್ಟಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಸನ್ಮಾನ್ಯ ಸಿದ್ದರಾಮಯ್ಯನವರೇ.. ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!? ದಯವಿಟ್ಟು ಹೇಳುವಿರಾ? ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ ‘ಕೈ’ ತೊಳೆದುಕೊಳ್ಳುವುದು ಎಷ್ಟು ಸರಿ? ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ? ಎಂದು ಕಿಡಿಕಾರಿದ್ದಾರೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…