ರಾಜ್ಯ

HDK vs CM: ‘ಸಿದ್ಧಹಸ್ತ’ ಶಾಮೀಲಾಗಿರುವ ಗಣಿಪುರಾಣ ಬಿಚ್ಚಿದರೆ ನಿಮ್ಮ ಮನೆಯ ಮುಂದೆ ಕಾನ್ಸ್ ಟೇಬಲ್ ಗಳು ಸಾಲುಗಟ್ಟಬೇಕಾಗುತ್ತದೆ: ಸಿಎಂಗೆ ಎಚ್‌ಡಿಕೆ ಗುದ್ದು

ಬೆಂಗಳೂರು: ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಬೆನ್ನಲೆ, ರಾಜ್ಯ ರಾಜಕೀಯ ವಲಯದಲ್ಲಿ ಪರ-ವಿರೋಧ ಚರ್ಚೆ ಶುರುವಾಗಿದೆ.

ಈ ನಡುವೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ಮಾತಿನ ಸಮರ ಆರ್ಭಟಿಸಿದ್ದು, ನಿನ್ನೆ ಸಿಎಂ ಸಿದ್ದರಾಮಯ್ಯ ಕುಮಾರಸ್ವಾಮಿ ಅವರನ್ನು ಬಂಧಿಸಲು ಒಬ್ಬ ಕಾನ್ಸ್‌ಟೇಬಲ್‌ ಸಾಕು ಎಂದಿದ್ದರು. ಸದ್ಯ ಈ ಹೇಳಿಕೆಗೆ ಎಚ್.ಡಿ ಕುಮಾರಸ್ವಾಮಿ ಸಿದ್ದರಾಮಯ್ಯಗೆ ಖಡಕ್‌ ತಿರುಗೇಟು ನೀಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಟ್ವೀಟ್‌ ಪೋಸ್ಟ್‌ ಮಾಡಿರುವ ಎಚ್.ಡಿ ಕುಮಾರಸ್ವಾಮಿ, ಸಿದ್ಧಹಸ್ತ ಸಿದ್ದರಾಮಯ್ಯ ನವರೇ, ನಿಮ್ಮ ವಿರುದ್ಧ ಬಂದ ಮೂಡಾ ಕೊಚ್ಚೆಯ ಗಮನ ಬೇರೆಡೆಗೆ ಸೆಳೆಯುವ ನಿಮ್ಮ ಹುನ್ನಾರ ನನಗೆ ಅರ್ಥವಾಗುತ್ತದೆ. ಹೇಗಾದರೂ ಅಧಿಕಾರದಲ್ಲೇ ಉಳಿದು ಲೂಟಿ ಹೊಡೆಯಬೇಕೆನ್ನುವ ನಿಮ್ಮ ಧನದಾಹದ ಹಪಾಹಪಿಯನ್ನೂ ಅರ್ಥ ಮಾಡಿಕೊಳ್ಳಬಲ್ಲೆ ಎಂದು ಕಿಡಿಕಾರಿದ್ದಾರೆ.

ಕಳ್ಳನ ಜಾಗದಲ್ಲಿ ನಿಂತು ಊರಿಗೆಲ್ಲ ಗೀತೆ ಬೋಧಿಸುವ ನಿಮ್ಮ ಪ್ರಾರಬ್ಧ ಎಂಥಾ ಕೀಳುಮಟ್ಟಕ್ಕೆ ಇಳಿದಿದೆ ಎನ್ನುವುದನ್ನೂ ಅರ್ಥ ಮಾಡಿಕೊಂಡಿದ್ದೇನೆ. ಎಷ್ಟೇ ಆದರೂ ನೀವು ಸಕಲ ಕಲೆಗಳ ಸಿದ್ದಕರ್ಮಿ, ಇಂಥ ಗಲೀಜು ಕೆಲಸ ನಿಮಗೆ ಬೆಣ್ಣೆಯಿಂದ ಬಂದ ವಿದ್ಯೆ ಎಂದಿದ್ದಾರೆ.

ಕಪ್ಪು ಚುಕ್ಕೆ ಇಲ್ಲಾ ಎನ್ನುವ ನಿಮಗೆ ವೈಟ್ನರ್‌ ಉಜ್ಜಯವ ಪ್ರಯತ್ನವೇಕೆ?

ಸಾಯಿ ವೆಂಕಟೇಶ್ವರಕ್ಕೆ 550 ಎಕರೆ ಮಂಜೂರು ಮಾಡಿದ್ದೇನೆ ಎಂದು ಬೊಗಳೆ ಬಿಟ್ಟಿದ್ದೀರಿ. ನನ್ನ ಬರವಣಿಗೆ ಪೋರ್ಜರಿ ಆಗಿದೆ. ಪತ್ರಿಕೆಗಳ ವರದಿಗೆ ನಾನು ಉತ್ತರ ಕೊಡುತ್ತೇನೆ, ಪಲಾಯನ ನನ್ನ ಜಾಯಮಾನವಲ್ಲ. ಆದರೆ, ಆ ವರದಿಯನ್ನೇ ನೆತ್ತಿ ಮೇಲಿಟ್ಟುಕೊಂಡು ಉಪ್ಪಿನಕಾಯಿ ಚಪ್ಪರಿಸುವ ದೈನೇಸಿ ಸ್ಥಿತಿ ನಿಮಗೇಕೆ? 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ.

ಸಿಎಂ ಗೆ ಸಾಲು ಸಾಲು ಪ್ರಶ್ನೆ:
•ಮೂಡದಲ್ಲಿ ನೀವು, ನಿಮ್ಮ ಸಕುಟುಂಬ ಪರಿವಾರ ಸರಕಾರಿ ಭೂಮಿಯನ್ನು ಹೇಗೆಲ್ಲಾ ಮುಕ್ಕಿತು ಎನ್ನುವುದಕ್ಕೆ ದಂಡಿದಂಡಿ ದಾಖಲೆಗಳೇ ಇವೆ. ನಿಮ್ಮ ಪಟಾಲಂ ಹೆಲಿಕಾಪ್ಟರ್ ನಲ್ಲಿ ಕದ್ದು ಸಾಗಿಸಿದ ದಾಖಲೆಗಳು ಸುಳ್ಳಾ? ಕಪ್ಪುಚುಕ್ಕೆಯನ್ನು ನಿಮ್ಮ ವೈಟ್ನರ್ ಅಳಿಸೀತಾ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ.

•ನನ್ನ ಸಹಿ ಇಲ್ಲ, ಟಿಪ್ಪಣಿಯೂ ಇಲ್ಲ ಅಂತೀರಿ. ಅಪ್ಪಣೆಯನ್ನಷ್ಟೇ ಕೊಟ್ಟಿದ್ದೀರಿ! 14 ಸೈಟಿಗೆ ₹62 ಕೋಟಿ ಪರಿಹಾರ ಕೇಳಲು ಹೇಳಿದ್ದು ಯಾವ ಟಿಪ್ಪಣಿ? ನಿಮ್ಮದು ನಾಲಿಗೆಯೋ.. ಇನ್ನೇನೋ.. ಆಚಾರವಿಲ್ಲದ ನಾಲಿಗೆ ನನ್ನ ತಟ್ಟೆಯತ್ತ ಚಾಚಿದೆ… ಸತ್ತ ಜೀವದ ರುಚಿ ನೆಕ್ಕಲು.. ಮಿಸ್ಟರ್ ಸಿದ್ದರಾಮಯ್ಯ.. ನಾನು ಕಾನೂನು ಪಂಡಿತ, ವಕೀಲ ಎನ್ನುತ್ತೀರಿ. 2011ರಲ್ಲಿ ಸುಪ್ರೀಂ ಕೋರ್ಟ್ SITಗೆ ಕೊಟ್ಟ ಆದೇಶವೇನು ಎಂದು ನಿಮಗೆ ಗೊತ್ತಿಲ್ಲವೇ? ನಾನು ವಕೀಲ.. ನಾನು ವಕೀಲ.. ಎಂದು ಪದೇಪದೆ ಹೇಳಬೇಡಿ ಎಂದು ಹಿಂದೆಯೇ ಸಲಹೆ ಮಾಡಿದ್ದೆ. ಬುದ್ಧಿಗೇಡಿಗಳಿಗೆ ಬುದ್ಧಿವಾದ ರುಚಿಸದು ಎಂದು ಟೀಕಿಸಿದ್ದಾರೆ.

ನಂಬಿ ಬಂದವರ ಬೆನ್ನಿಗೆ ಚೂರಿ ಹಾಕುವವರು ನೀವು:
ರಾಜ್ಯಪಾಲರಿಗೆ SIT ಬರೆದ ಪತ್ರ ಇಟ್ಟುಕೊಂಡು ಹಾರಾಟ ಮಾಡುತ್ತಿದ್ದೀರಿ ನೀವು. ಪತಂಗದ ಹಾರಾಟ ನೋಡಲಿಕ್ಕೆ ಚೆಂದ, ಕೆಳಗಿರುವ ಬೆಂಕಿಜ್ವಾಲೆ ಅದಕ್ಕೆ ಅರಿವಿರುವುದಿಲ್ಲ. ನಿಮ್ಮ ಬಗ್ಗೆ ನನಗೆ ಕನಿಕರವಿದೆ. ನಿಮ್ಮ ಆನಂದ ತಾತ್ಕಾಲಿಕ ಸಿದ್ದರಾಮಯ್ಯನವರೇ.. ಸುತ್ತಲೂ ಪಟಾಲಂ ಕಟ್ಟಿಕೊಂಡು, ಹೈಕಮಾಂಡ್ ಅನ್ನೇ ಕಾಲಕಸ ಮಾಡಿಕೊಂಡು, ನಂಬಿ ಕೈಹಿಡಿದವರ ಬೆನ್ನಿಗೆ ಚೂರಿ ಹಾಕಿ ಕುರ್ಚಿಗಾಗಿ ಪಾಲಿಟಿಕ್ಸ್ ಮಾಡುವ ನಿಮ್ಮ ದಿಕ್ಕೆಟ್ಟ ದುಸ್ಥಿತಿ ನನಗಿಲ್ಲ ಸಿದ್ದರಾಮಯ್ಯನವರೇ.. ನನ್ನ ರಾಜಕಾರಣ ನಿಮ್ಮಂತೆಯೇ ಹಣಕ್ಕೆ, ಅಧಿಕಾರಕ್ಕೆ ಅಲ್ಲ. ಅಧಿಕಾರ ಇದ್ದರೂ, ಇಲ್ಲದಿದ್ದರೂ ನಾನು ನಾನೇ… ‘ಸೋತರೆ ಸೋಲಬೇಕು ಬಾಹುಬಲಿಯಂತೆ..’ ಆ ಮಹಾನ್ ವಿರಾಗಿಯೇ ನನ್ನ ಆದರ್ಶ. 20 ತಿಂಗಳ ಅಧಿಕಾರ,14 ತಿಂಗಳ ಸರಕಾರ ತ್ಯಜಿಸುವಾಗಲೂ ನಾನು ನಿರ್ಭಾವುಕ. ಇದು ನಿಮಗೆ ಸಾಧ್ಯವೇ? ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ಹಣೆಬರಹ ನಿರ್ಧರಿಸುವ ನೂರಾರು ಪುರಾಣಗಳು ನನ್ನಲ್ಲಿವೆ:
ಗೌರವಾನ್ವಿತ ಪ್ರಧಾನಮಂತ್ರಿಗಳ ರಕ್ಷಣೆ ಪಡೆದುಕೊಳ್ಳುವ, ಅವರ ಗೌರವಕ್ಕೆ ಧಕ್ಕೆ ತರುವ ಕೆಲಸ ನಾನೆಂದೂ ಮಾಡಲಾರೆ. ನನ್ನನ್ನು ನಾನು ರಕ್ಷಣೆ ಮಾಡಿಕೊಳ್ಳುವುದೂ ಗೊತ್ತು. ನಿಮ್ಮ ದುಷ್ಟತನದ ಭಕ್ಷಣೆಯೂ ಗೊತ್ತು. ನನ್ನ ಪುರಾಣ ಕಂತುಗಳಲ್ಲಿ ಬರುತ್ತದೆ ಎನ್ನುವ ಸಿದ್ದರಾಮಯ್ಯನವರೇ.. ನಿಮ್ಮ ಹೆಣೆಬರಹ ನಿರ್ಧರಿಸುವ ನೂರಾರು ಪುರಾಣಗಳು ನನ್ನಲ್ಲಿವೆ. ಸಾವಿರಾರು ಚಾಪ್ಟರುಗಳ ಪ್ಯಾನ್ ಇಂಡಿಯಾ ಸಿನಿಮಾವನ್ನೇ ಮಾಡಬಹುದು.

ಬೇಲಿಕೇರಿಯಲ್ಲಿ ಅದಿರು ಕದ್ದ ಅಸಾಮಿಗಳ ಜತೆ ನಿಮ್ಮ ‘ಸಿದ್ಧಹಸ್ತ’ ಶಾಮೀಲಾಗಿರುವ ಗಣಿಪುರಾಣ ಬಿಚ್ಚಿದರೆ ನಿಮ್ಮ ಮನೆಯ ಮುಂದೆ ಕಾನ್ಸ್ ಟೇಬಲ್ ಗಳು ಸಾಲುಗಟ್ಟಬೇಕಾಗುತ್ತದೆ. ಹುಷಾರ್ ಎಂದು ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

4 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

4 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

4 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

5 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

6 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

6 hours ago